Political News | ಕಾಂಗ್ರೆಸ್ ಆಯ್ತು ಇದೀಗ‌ ಬಿಜೆಪಿ ಸರದಿ, 22 ರಂದು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲು ತೀರ್ಮಾನ

ಬೆಂಗಳೂರು, (www.thenewzmirror.com) ;

ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಹಗರಣಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜೀನಾಮೆಗೆ ಆಗ್ರಹಿಸಿ ನಾಳೆ ಅಂದರೆ ಆಗಸ್ಟ್ ,22 ರಂದು  ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನೀಲ್‍ಕುಮಾರ್ ತಿಳಿಸಿದ್ದಾರೆ.

RELATED POSTS

ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ರಾಜ್ಯ ಕೋರ್ ಕಮಿಟಿ ಸದಸ್ಯರು, ಸ್ಥಳೀಯ ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ.

ಕಾಂಗ್ರೆಸ್ ಪ್ರತಿಭಟನೆ ಸಂದರ್ಭದಲ್ಲಿ ರಾಜ್ಯಪಾಲರ ಭಾವಚಿತ್ರಕ್ಕೆ ಅವಮಾನ ಮಾಡಿದ್ದಾರೆ. ಅಲ್ಲದೆ, ಕೆಲವೆಡೆ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ, ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ. ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು  ಇದೇ ವೇಳೆ ಸುನೀಲ್ ಕುಮಾರ್ ಆಗ್ರಹಿಸಿದ್ರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist