Political News | ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಆಗ್ರಹ, ಶಾಸಕ ಯತ್ನಾಳ್ ರಿಂದ ಮಾಲಿನ್ಯ ನಿಯಂತ್ರಣ ಮಂಡಳಿ ವಿರುದ್ಧ ಪ್ರತಿಭಟನೆ, ಬಿಜೆಪಿ ನಾಯಕರ ಸಾಥ್..!!

ಬೆಂಗಳೂರು, (www.thenewzmirror.com) ;

ತನ್ನ ಒಡೆತನದ ಸಕ್ಕರೆ ಕಾರ್ಖಾನೆ ಪುನರಾರಂಭಕ್ಕೆ ಅನುಮತಿ ನೀಡದಿರುವುದಕ್ಕೆ ಶಾಸಕ ಬಸವನಗೌಡ ಯತ್ನಾಳ್ ಅಸಮಧಾನಗೊಂಡಿದ್ದಾರೆ. ಹೀಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರಿಗೆ ಬಿಜೆಪಿ ನಾಯಕರುಗಳಾದ ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಬಸವರಾಜ್ ಬೊಮ್ಮಾಯಿ, ಸಿ.ಟಿ.ರವಿ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದ್ದಾರೆ.

RELATED POSTS

ಈ ವೇಳೆ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಸರ್ಕಾರದ ವಿರುದ್ಧ ಕಿಡಿಕಾರಿದ ಬಿಜೆಪಿ ಮುಖಂಡರು ಸರ್ಕಾರದ ನಡೆ ವಿರುದ್ಧ ಅಸಮಧಾನ ಹೊರಹಾಕಿದ್ರು.

ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ‌. ಎಲ್ಲವೂ ಕಾನೂನು ಪ್ರಕಾರ ಮಾಡಿ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ. ಆದರೆ, ಕಳೆದ ವರ್ಷ ಇವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಕಾರ್ಖಾನೆಗೆ ಅನುಮತಿ ಕೊಡಲಿಲ್ಲ. ಆಗ ಇವರು ಕೋರ್ಟ್ ಮೊರೆ ಹೋದರು, ಕೋರ್ಟ್ ನಾಲ್ಕು ವಾರದೊಳಗೆ ಕಾರ್ಖಾನೆ ಪುನಾರಂಭಕ್ಕೆ ಆದೇಶ ಕೊಟ್ಟಿತು. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯವರು ತಾಂತ್ರಿಕ ಕಾರಣದ ನೆಪ ಹೆಳುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸಬೇಕು ಅಂತ ಅನುಮತಿ ಕೊಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಬಹಳ ದೊಡ್ಡ ತಾರತಮ್ಯ ಮಾಡುತ್ತಿದೆ. ಹಲವು ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ಕೊಟ್ಟು, ಇವರಿಗೆ ತಾರತಮ್ಯ ಮಾಡಲಾಗುತ್ತಿದೆ. ಪಿಸಿಬಿ ಕಾನೂನು ಉಲ್ಲಂಘಿಸಿದ ಕಾರ್ಖಾನೆಗಳಿಗೆ ಅನುಮತಿ ಕೊಟ್ಟಿದೆ ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ನಾಯಕರು ಗುಡುಗಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist