ಬೆಂಗಳೂರು, (www.thenewzmirror.com) ;
ಮೂಡ ಹಗರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಣನ್ ಗೆ ಅನುಮತಿ ಕೊಟ್ಟಿದ್ದನ್ನ ಸಿದ್ದರಾಮಯ್ಯ ಪ್ರಶ್ನಿಸಿದ್ದರು. ಇದರ ವಿರುದ್ಧ ಕೋರ್ಟ್ ಗೆ ಅರ್ಜಿಯನ್ನೂ ಸಲ್ಲಿಸಿದ್ರು. ಇಂದು ಅರ್ಜಿ ವಿಚಾರಣೆ ನಡೆಸಿದ ಹೈ ಕೋರ್ಟ್, ಆಗಸ್ಟ್ 31 ಕ್ಕೆ ಮುಂದೂಡಿಕೆ ಮಾಡಿದ್ದು, ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್ ಸಿಕ್ಕಂತಾಗಿದೆ.
ವಿಚಾರಣೆ ಎರಡು ದಿನ ಮುಂದೂಡಿಕೆ ಮಾಡಿದ್ದಲ್ಲದೆ ಮುಂದಿನ ವಿಚಾರಣೆವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಕೋರ್ಟ್ ಸೂಚಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಮುಖ್ಯಮಂತ್ರಿ ಅವರ ಕುಟುಂಬಸ್ಥರಿಗೆ ಅಕ್ರಮವಾಗಿ 14 ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಿತು.
ಮುಖ್ಯಮಂತ್ರಿಗಳ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ಕಚೇರಿಯ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು.