Political News | ಬಿಜೆಪಿ ವೈಫಲ್ಯ ಮುಚ್ಚಿಕೊಳ್ಳೋಕೆ ಪಾದಾಯಾತ್ರೆ ಮಾಡ್ತಿದೆಯಂತೆ…!

ಬೆಂಗಳೂರು, (www.thenewzmirror.com) ;

ಬಿಜೆಪಿ ಹಾಗೂ ಜೆಡಿಎಸ್ ಪಕ್ಷದವರು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವನ್ನು ಬೀಳಿಸುವ ಕನಸು ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಕೇಂದ್ರ ಸರ್ಕಾರ ಮೋಸ ಮಾಡುತ್ತಲೇ ಬಂದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಪಿಸಿದರು.

RELATED POSTS

ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರೋ ಜನಾಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿದ ಅವ್ರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ 10 ವರ್ಷದಿಂದ ಅಧಿಕಾರದಲ್ಲಿದ್ದರೂ ಕರ್ನಾಟಕಕ್ಕೆ ಅವರ ಕೊಡುಗೆ ಶೂನ್ಯ. ತಮ್ಮ ವೈಫಲ್ಯವನ್ನು ಮುಚ್ಚಿಹಾಕಿಕೊಳ್ಳಲು ಇಂದು ಬಿಜೆಪಿ ಪಾದಯಾತ್ರೆ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದರು.

ತನ್ನ ಗರ್ಭದಲ್ಲಿ ಭ್ರಷ್ಟಾಚಾರವನ್ನೇ ತುಂಬಿಕೊಂಡು, ಭ್ರಷ್ಟಾಚಾರಕ್ಕೆ ಇನ್ನೊಂದು ಹೆಸರು ಎನ್ನುವಂತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಕೇವಲ ಒಂದು ವರ್ಷದ ಹಿಂದೆ ಆಡಳಿತಕ್ಕೆ ಬಂದಿರುವ ನಮ್ಮ ಸರಕಾರದ ಮೇಲೆ ಇಲ್ಲದ ಆರೋಪಗಳನ್ನು ಮಾಡುವ ಮೂಲಕ ಜನಪರ ಆಡಳಿತ ನಡೆಸುವುದಕ್ಕೆ ಸಹಕಾರ ನೀಡುವ ಬದಲು ವಿನಾಕಾರಣ ಅಡ್ಡಿ ಉಂಟು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಎರಡನೇ ಬಾರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಿರುವುದನ್ನು ಸಹಿಸದ ಬಿಜೆಪಿ-ಜೆಡಿಎಸ್ ಪಕ್ಷದವರು, ಇಂದು ಇಲ್ಲ ಸಲ್ಲದ ಆರೋಪ ಮಾಡುವ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಇಂದಿರಾಗಾಂಧಿ ಪ್ರಧಾನಿಯಾಗಿದ್ದ ವೇಳೆ ಬ್ಯಾಂಕ್ ಗಳನ್ನು ರಾಷ್ಟ್ರೀಕರಣ ಮಾಡಿ, ಜನ ಸಾಮಾನ್ಯರಿಗೂ ಸಾಲ ಸಿಗುವಂತೆ ಮಾಡಿದರು. ಆದರೆ, ಇಂದಿನ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ದೇಶದ ಬ್ಯಾಂಕ್ ಗಳನ್ನೇ ಖಾಸಗೀಕರಣ ಮಾಡುತ್ತಿದೆ. ದೇಶದ ಶ್ರೀಮಂತರ ಪರವಾಗಿ ಕೇಂದ್ರ ಸರ್ಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಾರಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist