Political News | ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ ನಿಲ್ಲಲ್ಲ: ವಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು, (www.thenewzmirror.com) ;

ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹಾಗೂ ಸಿಬಿಐ ತನಿಖೆಗೆ ವಹಿಸುವವರೆಗೂ ಬಿಜೆಪಿಯಿಂದ ಹೋರಾಟ ನಡೆಯಲಿದೆ. ಈ ಹೋರಾಟ ನಿಲ್ಲುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

RELATED POSTS

ಬಿಜೆಪಿಯ ಹೋರಾಟದ ಫಲವಾಗಿ ಮುಡಾ ಹಗರಣ ಈ ಹಂತಕ್ಕೆ ಬಂದಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬುದು ನಮ್ಮ ಆಗ್ರಹ. ಈ ಗುರಿ ಈಡೇರುವವರೆಗೂ ಹೋರಾಟ ಮಾಡುತ್ತೇವೆ. ಈ ಹೋರಾಟ ನಿಲ್ಲಲ್ಲ. ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡಲ್ಲ ಎಂದಿದ್ದರು. ಬಳಿಕ ಕಾನೂನಿನ ಕುಣಿಕೆಯಲ್ಲಿ ಸಿಲುಕಿಕೊಂಡು ರಾಜೀನಾಮೆ ನೀಡಿದರು. ಇದೇ ರೀತಿ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕಾಗುತ್ತದೆ ಎಂದರು.

ಚುನಾವಣಾ ಬಾಂಡ್‌ ಬಗ್ಗೆ ಕಾಂಗ್ರೆಸ್‌ ದೊಡ್ಡದಾಗಿ ಮಾತಾಡುತ್ತಿದೆ. ಕಾಂಗ್ರೆಸ್‌ ಪಕ್ಷಕ್ಕೆ 1,500 ಕೋಟಿ ರೂ.ಗೂ ಅಧಿಕ ಹಣ ದೇಣಿಗೆ ಬಂದಿದೆ. ತೃಣಮೂಲ ಕಾಂಗ್ರೆಸ್‌ಗೆ 1,610 ಕೋಟಿ ರೂ. ಬಂದಿದೆ. ವಿರೋಧ ಪಕ್ಷಗಳ ಒಟ್ಟು ಹಣಕ್ಕೆ ಹೋಲಿಸಿದರೆ ಬಿಜೆಪಿಯದ್ದು ತೀರಾ ಕಡಿಮೆ. ಇದು ನ್ಯಾಯಾಲಯದಲ್ಲಿ ವಿಚಾರಣೆಯಾಗಿ ಮುಗಿದುಹೋಗಿದೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅವರ ವಿರುದ್ಧ ಮಾತನಾಡಲು ಈ ವಿವಾದ ಮಾಡಲಾಗಿದೆ. ಇದು ಮುಡಾ ಹಗರಣದ ಹಿನ್ನೆಲೆಯಲ್ಲಿ ಹುಟ್ಟುಹಾಕಿದ ವಿವಾದ. ಇವೆಲ್ಲವೂ ಕಾಂಗ್ರೆಸ್‌ ಪ್ರಾಯೋಜಿತ ಎಂದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೂರು ವರ್ಷ ಬಾಳಲಿ. ಖರ್ಗೆಯವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಸವಾಲೆಸೆಯುವುದು ಬೇಡ. ಕರ್ನಾಟಕದಲ್ಲಿ ಒಮ್ಮೆ ಸಿಎಂ ಆಗಬೇಕು ಎಂಬ ಆಸೆಯನ್ನು ಮಲ್ಲಿಕಾರ್ಜುನ ಖರ್ಗೆ ತೀರಿಸಿಕೊಳ್ಳಬಹುದು. ಆದರೆ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ಕೆಳಕ್ಕಿಳಿಸಲು ಸಾಧ್ಯವಿಲ್ಲ. ಮುಳುಗುತ್ತಿರುವ ಹಡಗಾಗಿರುವ ಕಾಂಗ್ರೆಸ್‌ ದೋಣಿಯ ಮೂಲಕ ಈ ಕೆಲಸ ಮಾಡಲು ಹೋಗುವುದು ಹಗಲುಗನಸು ಎಂದು ವ್ಯಂಗ್ಯವಾಡಿದರು.

ಅಧಿಕಾರಿ ವಿರುದ್ಧ ಕ್ರಮ ವಹಿಸಿ

ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್‌ ಹಂದಿ ಎಂದು ನಿಂದಿಸಿದ್ದಾರೆ. ಈ ಅಧಿಕಾರಿಯ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು. ಕಾನೂನಿನಿಂದ ನುಣುಚಿಕೊಳ್ಳಲು ನೇರವಾಗಿ ಪತ್ರ ಬರೆಯದೆ, ಕೆಳ ಹಂತದ ಅಧಿಕಾರಿಗಳಿಗೆ ಪತ್ರ ಬರೆಯಲಾಗಿದೆ. ಅಧಿಕಾರಿ ತನ್ನ ಮಿತಿ ಮೀರಿ ವರ್ತಿಸಿರುವುದು ಖಂಡನೀಯ. ಸರ್ಕಾರದ ಮುಖ್ಯ ಕಾರ್ಯದರ್ಶಿ ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist