ಬೆಂಗಳೂರು, (www.thenewzmirror.com) ;
ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗಗಳಲ್ಲಿ ನಿರಂತರ ಮಳೆ ಆಗುತ್ತಿದೆ. ಅದರಲ್ಲೂ ಕಳೆದ ಒಂದು ವಾರದಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಕೆಲ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಎಂದು ಅರಣ್ಯ ಇಲಾಖೆ ಆದೇಶ ಹೊರಡಿಸಿದೆ. ವನ್ಯಜೀವಿ ವಲಯದ ವ್ಯಾಪ್ತಿಗೆ ಬರುವ ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಲಾಗಿದ್ದು ಬೆಟ್ಟಗಳು, ಜಲಪಾತಗಳ ಬಳಿ ತೆರಳದಂತೆ ಪ್ರವಾಸಿಗರಿಗೆ ಸೂಚನೆ ನೀಡಲಾಗಿದೆ.
ಬೆಳ್ತಂಗಡಿ ತಾಲೂಕಿನ ನರಸಿಂಹಗಢ ಬೆಟ್ಟ, ಅರಿಶಿನಗುಂಡಿ, ಕೂಡ್ಲು, ಬರ್ಕಳ, ಹಿಡ್ಲುಮನೆ, ವನಕಬ್ಬಿ, ಬಂಡಾಜೆ ಫಾಲ್ಸ್ ಸೇರಿದಂತೆ ಕೆಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ವಿಧಿಸಿ ಎಂದು ಬೆಳ್ತಂಗಡಿ ಆರ್ಎಫ್ಒಗೆ ಕುದುರೆಮುಖ ಸಿಎಫ್ ಆದೇಶ ಹೊರಡಿಸಿದೆ.