ಬೆಂಗಳೂರು, (www.thenewzmirror.com) ;
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಅಂತ ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಗಂಟೆಗೆ ಮೂವತ್ತರಿಂದ ನಲವತ್ತು ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಇದರ ಜತೆಗೆ ಮಳೆಯಾಗಲಿದೆ ಅಂತ ಮುನ್ಸೂಚನೆ ಕೊಟ್ಟಿದೆ. ಹೀಗಾಗಿ ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಅಂತಾನೂ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯಾದ್ಯಾಂತ ಮುಂದಿನ ಎರಡು ದಿನಗಳ ಕಾಲ ಮಳೆ ಆಗಲಿದ್ದು, ರಾಜ್ಯ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಕೊಟ್ಟಿದೆ. ಇದರ ಜತೆಗೆ ಉತ್ತರ ಕನ್ನಡದ ಕೆಲ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಸಾಧಾರಣ ಮಳೆಯಾಗಲಿದೆ ಅಂತಾನೂ ಮಾಹಿತಿ ಕೊಟ್ಟಿದೆ.
ಬೆಂಗಳೂರು ಸುತ್ತಮುತ್ತಲೂ ಮಳೆ
ಹಾಗೆನೇ ಹವಾಮಾನ ಇಲಾಖೆ ಕೊಟ್ಟಿರುವ ಮಾಹಿತಿ ಪ್ರಕಾರ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ತುಂತುರು ಮಳೆಯಾಗಲಿದೆ ಅಂತ ತಿಳಿಸಿದೆ.
ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರೋದ್ರಿಂದ ಕನಿಷ್ಠ , 20.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ 29.6 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಅಂತ ತಿಳಿಸಿದೆ.