ನವದೆಹಲಿ, (www.thenewzmirror.com) :
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನಾಮನಿರ್ದೇಶಿತರಾಗಿದ್ದ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ಸುಧಾಮೂರ್ತಿ ಅವರು ಇಂದು ರಾಜ್ಯಸಭೆ ಸದಸ್ಯೆಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ರು.
ಲೇಖಕಿ,ಸಮಾಜಸೇವಕಿ, ಇನ್ಫೋಸಿಸ್ ಮಾಜಿ ಅಧ್ಯಕ್ಷೆಯಾಗಿರುವ ಸುಧಾ ಮೂರ್ತಿ ಅವರು ಇಂದು ದೆಹಲಿಯ ಸಂಸತ್ತಿನ ಮೇಲ್ಮನೆ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮೂಲತಃ ಇಂಜಿನಿಯರ್ ಆಗಿರುವ ಸುಧಾ ಮೂರ್ತಿ ತಮ್ಮ ಪತಿ ಎನ್ ಆರ್ ನಾರಾಯಣ ಮೂರ್ತಿ ಅವರ ಸಮ್ಮುಖದಲ್ಲಿ ರಾಜ್ಯಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರು ಸಂಸತ್ ಭವನದ ತಮ್ಮ ಕಚೇರಿಯಲ್ಲಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಪಿಯೂಷ್ ಗೋಯಲ್, ಪತಿ ನಾರಾಯಣ ಮೂರ್ತಿ ಉಪಸ್ಥಿತರಿದ್ದರು.
ಮೂಲತಃ ಹುಬ್ಬಳ್ಳಿಯವರಾದ ಸುಧಾಮೂರ್ತಿಯವರಿಗೆ ಕನ್ನಡ ಭಾಷೆಯೆಂದರೆ ವಿಶೇಷ ಒಲವು, ಅಚ್ಚುಮೆಚ್ಚು. ಅದನ್ನು ಪದೇಪದೇ ನಿರೂಪಿಸುತ್ತಿರುತ್ತಾರೆ. ಇಂದು ರಾಜ್ಯಸಭೆ ಸದಸ್ಯರಾಗಿ ಕೂಡ ಅವರು ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿ ಮತ್ತೊಮ್ಮೆ ಕನ್ನಡಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.