ಬೆಂಗಳೂರು(www.thenewzmirror.com):ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್, ಅಟಲ್ ಬಿಹಾರಿ ವಾಜಪೇಯಿ, ಸಂಗೊಳ್ಳಿ ರಾಯಣ್ಣ, ನಾರಾಯಣಗುರು ಸೇರಿದಂತೆ ಇತರ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಹರಾದವರ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತನ್ನ ವೆಬ್ಸೈಟ್ನಲ್ಲಿ ಪ್ರಕಟಿಸಿದೆ.
ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದವರು ಏ.29ರೊಳಗೆ ಸಂಬಂಧಪಟ್ಟ ಶಾಲೆಗಳಿಗೆ ಹೋಗಿ ವರದಿ ಮಾಡಿಕೊಳ್ಳಬೇಕು. ಶಾಲಾ ಹಂತದಲ್ಲೇ ಮೂಲ ದಾಖಲೆಗಳ ಪರಿಶೀಲನೆ ಕೂಡ ನಡೆಯಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಏಕಲವ್ಯ ಶಾಲೆ: 2ನೇ ಸುತ್ತಿನ ಸೀಟು ಹಂಚಿಕೆ:
ಏಕಲವ್ಯ ಮಾದರಿ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಏ.28ರೊಳಗೆ ಸಂಬಂಧಪಟ್ಟ ಶಾಲೆಗಳಲ್ಲಿ ಪ್ರವೇಶ ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.