ಬೆಂಗಳೂರು, ( www.thenewzmirror.com) :
ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧದ ಶಂಕಿತ ಆರೋಪಿಯನ್ನ ಹುಡುಕಿಕೊಟ್ಟರೆ 10 ಲಕ್ಷ ಬಹುಮಾನ ನೀಡುವುದಾಗಿ NIA ರಾಷ್ಟ್ರೀಯ ತನಿಖಾ ದಳ ಘೋಷಿಸಿದೆ. ಹಾಗೆನೇ ಮಾಹಿತಿ ನೀಡಿದವರ ವ್ಯಕ್ತಿಯನ್ನು ಗೌಪ್ಯವಾಗಿ ಇಡುವುದಾಗಿಯೂ ತಿಳಿಸಿದೆ.
ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ತನಿಖೆ ಚುರುಕುಗೊಳಿಸಿದ್ದು, ಕೆಲವು ಶಂಕಿತರ ಮಾಹಿತಿ ಮೇರೆಗೆ ಬೆಂಗಳೂರು ಮಾತ್ರವಲ್ಲ, ಹೊರ ರಾಜ್ಯಗಳಲ್ಲಿ ಸಹ ಕಾರ್ಯಾಚರಣೆ ನಡೆಸಿದೆ.
ಸ್ಥಳೀಯರ ಮಾಹಿತಿಯನ್ನೂ ಈ ವೇಳೆ ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಕಫೆಯ ಮುಂಭಾಗದಲ್ಲಿಯೇ ಬಸ್ ನಿಲ್ದಾಣವಿದ್ದು, ಕೆಫೆಯವರೆಗೆ ಶಂಕಿತ ವ್ಯಕ್ತಿ ನಡೆದು ಬಂದ ದಾರಿಯನ್ನು ತನಿಖೆ ಮಾಡಿದೆ. ಘಟನೆ ನಡೆದ ಬಳಿಕ ಈತ ತಮಿಳುನಾಡು ಅಥವಾ ಕೆರಳ ರಾಜ್ಯಕ್ಕೆ ಹೋಗಿರಬಹುದು ಎನ್ನುವ ಶಂಕೆ ಇದ್ದು ಹೊರ ರಾಜ್ಯಗಳಲ್ಲೂ NIA ತನಿಖೆ ನಡೆಸುತ್ತಿದೆ.
ಬಾಂಬ್ ಸ್ಫೋಟ ನಡೆಸಿದ ಶಂಕಿತನ ವಿಡಿಯೋಗಳು ಈಗಾಗಲೇ ವೈರಲ್ ಆಗಿದೆ. ಈ ವ್ಯಕ್ತಿಯ ಮಾಹಿತಿ ನೀಡಿ, ಆತನ ಬಂಧನಕ್ಕೆ ಕಾರಣವಾದಲ್ಲಿ ಅವರಿಗೆ 10 ಲಕ್ಷ ರೂಪಾಯಿ ಬಹುಮಾನ ಸಿಗಲಿದೆ. ಶಂಕಿತ ಉಗ್ರನ ಮಾಹಿತಿಯನ್ನು 08029510900, 8904241100 ತಿಳಿಸುವಂತೆ ಎನ್‌ಐಎ ತಿಳಿಸಿದ್ದು, ಮಾಹಿತಿ ನೀಡಿದ ವ್ಯಕ್ತಿಯ ಗುರುತನ್ನು ಗೌಪ್ಯವಾಗಿ ಇಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದೆಲ್ಲ ಬೆಳವಣಿಗೆ ನಡುವೆ ಪೊಲೀಸರು ಆರೋಪಿಯ ಮಾಸ್ಕ್ ಇಲ್ಲದ ಫೋಟೋವನ್ನು ಬಿಡುಗಡೆ ಮಾಡಿದೆ. ಒಂದು ಚಿತ್ರದಲ್ಲಿ ಶಂಕಿತನು ಟೋಪಿ ಮತ್ತು ಮಾಸ್ಕ್ ಇಲ್ಲದೇ ಕಾಣಿಸಿಕೊಂಡಿದ್ದಾನೆ.
ಈ ಹಿಂದೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೆಫೆಗೆ ಪ್ರವೇಶಿಸುವಾಗ ಕ್ಯಾಪ್, ಮಾಸ್ಕ್ ಮತ್ತು ಕನ್ನಡಕ ಧರಿಸಿದ ಶಂಕಿತ ಬಾಂಬರ್ ನ ಚಿತ್ರ ಪೋಸ್ಟ್ ಮಾಡಿತ್ತು.