ಬೆಂಗಳೂರು, (www.thenewzmirror.com) ;
ಶುಕ್ರವಾರ ರಾಜ್ಯದಲ್ಲಿ ಭೀಕರ ರಸ್ತೆ ಅಫಘಾತ ನಡೆದಿದ್ದು, ದೇವರ ದರ್ಶನಕ್ಕೆ ತೆರಳಿದ್ದ 13 ಮಂದಿ ಇಹಲೋಕ ತ್ಯಜಿಸಿದ್ದಾರೆ. ಪುಣೆ – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.
ರಸ್ತೆಯ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ್ದು, ಪರಿಣಾಮವಾಗಿ 13 ಜನರು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ನಲ್ಲಿ ಸಾವನಪ್ಪಿದ್ದಾರೆ. ಉಳಿದ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತರು ಸವದತ್ತಿ ರಲ್ಲಮ್ಮನ ದರ್ಶನಕ್ಕೆ ತೆರಳಿದ್ದರು ಎಂದು ವರದಿಯಾಗಿದೆ. ದೇವಸ್ಥಾನದಿಂದ ಮರಳಿ ಬರುವಾಗ ಅಪಘಾತ ಸಂಭವಿಸಿದೆ. ಮೃತರು ಶಿವಮೊಗ್ಗ ಮೂಲದ ಎಮ್ಮೆಹಟ್ಟಿ ನಿವಾಸಿಗಳು ಎನ್ನಲಾಗಿದೆ.
ಬೆಳಗಿನ ಜಾವ 4 ಗಂಟೆಯ ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನ ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇನ್ನು ಘಟನೆ ಕುರಿತಂತೆ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ, ಸ್ಥಳೀಯ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ಸಂತಾಸ ಸೂಚಿಸಿದ್ದಾರೆ. ಕೂಡಲೇ ಸರ್ಕಾತ ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆಯೂ ಆಗ್ರಹಿಸಿದ್ದಾರೆ.