Sad News | ಇನ್ನೋಬ್ಬರ ಜೀವ ಉಳಿಸಲು ಹೋಗಿ ತಾನೇ ಜೀವ ಕಳೆದುಕೊಂಡ ಮಹಿಳೆ..!

Sad News A woman lost her own life trying to save someone else's life..!

ಬೆಂಗಳೂರು/ಉಡುಪಿ, (www.thenewzmirror.com);

ಇನ್ನೊಬ್ಬರ ಜೀವ ಉಳಿಸಲು ಹೋಗಿ ತಾನೇ ಜೀವ ತೆತ್ತ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲಿ ನಡೆದಿದೆ. ಅರ್ಚನಾ ಕಾಮತ್ (34) ಮೃತಪಟ್ಟ ಮಹಿಳೆ.

RELATED POSTS

ಕುಂದಾಪುರ ತಾಲೂಕಿನ ಕೊಟೇಶ್ವರದಲ್ಲಿ ಈ ಘಟನೆ ನಡೆದಿದೆ. 69 ವರ್ಷ ಹಿರಿಯ ಸಂಬಂಧಿಕ ಮಹಿಳೆಗೆ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು. ತಮ್ಮದೇ ಕುಟುಂಬದವರಾಗಿದ್ದರಿಂದ ಅರ್ಚನಾ ತಮ್ಮ ಯಕೃತ್​ನ ಒಂದು ಭಾಗವನ್ನು ದಾನ ಮಾಡಲು ಮುಂದಾಗಿದ್ದರು.

ಅದರಂತೆ ಬೆಂಗಳೂರಿನ ಆಸ್ಪತ್ರೆಯಲ್ಲಿ 12 ದಿನಗಳ ಹಿಂದೆ ಶಸ್ತ್ರಚಿಕಿತ್ಸೆ ನಡೆದಿದ್ದು, ಅರ್ಚನಾ ಅವರ ಯಕೃತ್ತಿನ ಒಂದು ಭಾಗವನ್ನು ಯಶಸ್ವಿಯಾಗಿ ಕಸಿ ಮಾಡಲಾಗಿತ್ತು. ಇದಾದ ಬಳಿಕ ಚೇತರಿಸಿಕೊಂಡು ಅರ್ಚನಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಕೆಲ ದಿನಗಳ ಬಳಿಕ ಜ್ವರ ಕಾಣಿಸಿಕೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಸದಾ ಸಮಾಜಮುಖಿ ಚಿಂತನೆಯೊಂದಿಗೆ ಸಕ್ರಿಯವಾಗಿದ್ದ ಅರ್ಚನಾ ಕಾಮತ್ ಅವರು ನಗರದ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿದ್ದರು. ಮೃತ ಅರ್ಚನಾ ಪತಿ, 4 ವರ್ಷದ ಮಗು, ತಂದೆ, ತಾಯಿಯನ್ನು ಅಗಲಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist