ಬೆಂಗಳೂರು, (www.thenewzmirror.com) ;
ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನರಾಗಿದ್ದಾರೆ. ಹಿಂದಿನ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಶೇಕಡಾ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ನಂತರ ಕರ್ನಾಟಕದಾದ್ಯಂತ ಸುದ್ದಿಯಾಗಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಇಂದು ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದರು. ಇಂದು ಬೆಳಗಿನ ಜಾವ ಹೊಸಕೋಟೆಯ ಅವರ ನಿವಾಸದಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಹಿಂದೆ ಬಿಜೆಪಿ ಸರ್ಕಾರದ ವಿರುದ್ಧ ಶೇಕಡಾ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೂ ಪತ್ರ ಬರೆದು ಸಂಚಲನ ಸೃಷ್ಟಿಸಿದ್ದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಕೂಡ ಕವಿಷನ್ ಆರೋಪ ಮಾಡಿದ್ದರು. ರಾಜ್ಯದ ಗುತ್ತಿಗೆದಾರರ ಪರ ಹೋರಾಟ ನಡೆಸಿಕೊಂಡು ಬಂದಿದ್ದರು.
ಸಿಎಂ ಸಿದ್ದರಾಮಯ್ಯ ಸಂತಾಪ
ಭ್ರಷ್ಟಚಾರದ ವಿರುದ್ಧ ಧನಿ ಎತ್ತಿದ ವಿಚಾರದಲ್ಲಿ ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿ ಎತ್ತಿದ್ದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ನಾಡು ಇಂದು ಕಳೆದುಕೊಂಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಕಲಿ, ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಎಂದು ಎಕ್ಸ್ ಖಾತೆಯಲ್ಲಿ ನೋವಿನ ಮಾತುಗಳನ್ನ ಹಂಚಿಕೊಂಡಿದ್ದಾರೆ.