Sad News | ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ಇನ್ನಿಲ್ಲ, ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟಿಯ ನಿಧನಕ್ಕೆ ಗಣ್ಯರ ಕಂಬನಿ

ಬೆಂಗಳೂರು, (www.thenewzmirror.com) ;

ಕನ್ನಡ ಚಿತ್ರರಂಗದ ಖ್ಯಾತ ನಟಿ, ನಿರೂಪಕಿ ಅಪರ್ಣಾ ವಸ್ತಾರೆ ಇಂದು ನಿಧನರಾಗಿದ್ದಾರೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅಪರ್ಣಾ, ಬನಶಂಕರಿಯ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

RELATED POSTS

ಕನ್ನಡಿಗರಲ್ಲದವರೂ ತಲೆದೂಗುವಂತೆ ಕನ್ನಡ ಮಾತನಾಡುತ್ತಿದ್ದ, ಸ್ಪಷ್ಟ ಉಚ್ಚಾರ, ಅದಕ್ಕೆ ತಕ್ಕ ಹಾವ-ಭಾವ, ನಿರೂಪಣೆ ವೇಳೆ ಕನ್ನಡದ ಪದಗಳನ್ನು ಪೋಣಿಸುತ್ತಿದ್ದ ನಿರೂಪಕಿ ಅಂತಾನೇ ಅಪರ್ಣಾ ಖ್ಯಾತಿ ಗಳಿಸಿದ್ದರು.

ನಿರೂಪಕಿಯಾಗಿ ಮಾತ್ರವಲ್ಲದೇ ನಟಿಯಾಗಿಯೂ ಅಪರ್ಣಾ ಗುರುತಿಸಿಕೊಂಡಿದ್ದರು. ಅಷ್ಟೇ ಅಲ್ಲದೇ ಹಲವು ಸೀರಿಯಲ್​ಗಳಲ್ಲಿ ನಟಿಸಿ ಖ್ಯಾತಿ ಗಳಿಸಿದ್ರು. ಹಲವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಅಪರ್ಣಾ ಇಂದು ಸಂಜೆ ಬನಶಂಕರಿ ಸೆಕೆಂಡ್ ಸ್ಟೇಜ್ ನ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ನಿರೂಪಕಿಯ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು.

1984ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ಅವರು ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದರು. ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿ ಹಲವು ಚಿತ್ರಗಳಲ್ಲಿ ನಟನೆ ಮಾಡಿದರು. 90ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳ ನಿರೂಪಣೆ ಮಾಡಿದ ನಂತರ ಭಾರತ ಸರ್ಕಾರದ ವಿವಿಧ ಭಾರತಿಯಲ್ಲಿ ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು.

2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು. 2014ರಲ್ಲಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಘೋಷಣೆಯಾಗುವ ‘ಪ್ರಯಾಣಿಕರು ಹತ್ತುವ ಮತ್ತು ಇಳಿಯುವ ಸೂಚನೆ’ಗೆ ಧ್ವನಿ ನೀಡಿದ್ದು ಕೂಡ ಇವರೇ. ಅಚ್ಚಕನ್ನಡ ಮಾತಾಡುವ ನಿರೂಪಕಿ ಆಗಿ ಅಪರ್ಣಾ ಜನಪ್ರಿಯರಾಗಿದ್ರು. ತನ್ನ ಮಾತುಗಾರಿಕೆಯಿಂದಲೇ ಅಪರ್ಣ ಅಪಾರ ಅಭಿಮಾನಿಗಳನ್ನು ಗಳಿಸಿದ್ರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist