Shoking News | ಕನ್ನಡದ ಮೊದಲ IAS ಅಧಿಕಾರಿ, ಹಿರಿಯ ನಟ ಕೆ. ಶಿವರಾಮ್ ಇನ್ನಿಲ್ಲ..!

Sad News: K. Shivaram, Kannada's First IAS Officer and Veteran Actor, Passes Away..!

ಬೆಂಗಳೂರು, (www.thenewzmirror.com) :

ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಿವೃತ್ತ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ಶಿವರಾಮ್ ಅವರ ಬಹುಕಾಲದ ಗೆಳೆಯ ನಾಗೇಶ್ ಕಾಳೇನಹಳ್ಳಿ ತಮ್ಮ ಫೇಸ್ ಬುಕ್ ಮುಖ ಪುಟದಲ್ಲಿ ಬರೆದುಕೊಂಡು, ಮಾಹಿತಿ ಹಂಚಿಕೊಂಡಿದ್ದಾರೆ.

RELATED POSTS

ನಿನ್ನೆ ಸಂಜೆ ನನ್ನ ಅನುಗಾಲದ ಗೆಳೆಯ ಅರದೇಶಹಳ್ಳಿ ವೆಂಕಟೇಶ್, ಕೆ. ಶಿವರಾಂ ಅವರು ಸೀರಿಯಸ್ಸಾಗಿದ್ದು, HCG ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆಸ್ಪತ್ರೆಗೆ ದಾಖಲಾದಾಗಿನಿಂದ ಚಿಕಿತ್ಸೆಗೆ ಸ್ಪಂದನೆ ಮಾಡುತ್ತಿರಲಿಲ್ಲವಂತೆ. ವೈದ್ಯರ ಸತತ ಪರಿಶ್ರಮ ಪಟ್ಟರೂ ಕೊನೆಗೂ ಅವರನ್ನ ಉಳಿಸಿಕೊಳ್ಳಲಿ ಸಾಧ್ಯವಾಗಲಿಲ್ಲ ಎಂದು ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಬರೆದು ಭಾರತೀಯ ಆಡಳಿತಾ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ನಿವೃತ್ತರಾಗಿದ್ದ ಹಾಗೂ ‘ಬಾ ನಲ್ಲೆ ಮಧು ಚಂದ್ರಕೆ’ ಸೇರಿದಂತೆ ಹಲವು ಚಿತ್ರಗಳ ಮೂಲಕ ಕನ್ನಡ ಸಿನಿ ರಸಿಕರಿಗೆ ಪರಿಚಿತರಾಗಿದ್ದ ಕೆ. ಶಿವರಾಮ್ ಅವರಿಗೆ ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಎಚ್ ಸಿಜಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂತಹ ಅವರು ಇಂದು ಚಿಕಿತ್ಸೆ ಫಲಿಸದೇ ಇನ್ನಿಲ್ಲವಾಗಿದ್ದಾರೆ.

ಯಾರು ನಟ ಕೆ.ಶಿವರಾಮ್.?

ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ಆ ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ ಭಾರತದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

1993 ರಲ್ಲಿ ತೆರೆಗೆ ಬಂದ ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಬಾ ನಲ್ಲೆ ಮಧುಚಂದ್ರಕೆ’ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕೆ.ಶಿವರಾಮ್ ಪ್ರವೇಶಿಸಿದ್ದರು. ‘ವಸಂತ ಕಾವ್ಯ’, ‘ಸಾಂಗ್ಲಿಯಾನಾ ಪಾರ್ಟ್ 3’, ‘ಪ್ರತಿಭಟನೆ’, ‘ಯಾರಿಗೆ ಬೇಡ ದುಡ್ಡು’, ‘ಗೇಮ್ ಫಾರ್ ಲವ್’, ‘ಟೈಗರ್’ ಮುಂತಾದ ಕನ್ನಡ ಚಿತ್ರಗಳಲ್ಲಿ ಕೆ.ಶಿವರಾಮ್ ಅಭಿನಯಿಸಿದ್ದಾರೆ.

2013 ರಲ್ಲಿ ಐಎಎಸ್ ನಿಂದ ಸ್ವಯಂ ನಿವೃತ್ತಿ ಪಡೆದ ನಂತರ ಕಾಂಗ್ರೆಸ್ ಪಕ್ಷದ ಮೂಲಕ ರಾಜಕೀಯ ಜೀವನ ಆರಂಭಿಸಿದ್ದರು. ಕೆ.ಶಿವರಾಮ್, 2014 ರಲ್ಲಿ ವಿಜಯಪುರ ಲೋಕಸಭೆ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿ ಸೋತರು. ನಂತರ ಅದೇ ವರ್ಷ ದಲಿತರಿಗೆ ಸಿ.ಎಂ ಪಟ್ಟ ಸಿಗಬೇಕೆಂದು ಪರಮೇಶ್ವರ್ ಬೆಂಬಲಿಸಿ ಕಾಂಗ್ರೆಸ್ ಸೇರಿದರು. ಆದರೆ ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಬಿಜೆಪಿ ಸೇರಿದರು. ಛಲವಾದಿ ಮಹಸಭಾ ಅಧ್ಯಕ್ಷರಾಗಿದ್ದರು. ದಲಿತ ಪರ ಹೋರಾಟಕ್ಕೆ ಹೆಸರುವಾಸಿಯಾಗಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist