ಬೆಂಗಳೂರು, (www.thenewzmirror.com) ;
ತೈಲ ಬೆಲೆ ಏರಿಕೆ ಖಂಡಿಸಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಂಡು ತೆರಳುತ್ತಿದ್ದ ವೇಳೆ ಬಿಜೆಪಿ ಮುಖಂಡ ಎಂ.ಬಿ. ಭಾನುಪ್ರಕಾಶ್ ಸಾವನ್ನಪ್ಪಿದ್ದಾರೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಟ್ಟಾ ಅನುಯಾಯಿ ಹಾಗೂ ಹಿರಿಯ ಬಿಜೆಪಿ ನಾಯಕರಾಗಿದ್ದ ಭಾನುಪ್ರಕಾಶ್, ಬಿಜೆಪಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗಿಯಾಗಿ ತೆರಳುತ್ತಿದ್ದಾಗ ಅವರಿಗೆ ಹೃದಯಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
2013 ರಿಂದ 2019 ರವರೆಗೆ ಅವರು ವಿಧಾನ ಪರಿಷತ್ ಸದಸ್ಯರಾಗಿದ್ದರು. ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧೆ ನಡೆಸಿದ್ದರು. ಮಾತುಗಾರಿಕೆ ಹಾಗೂ ಸರಳತೆಯಿಂದ ಗುರುತಿಸಿಕೊಂಡ ನಾಯಕರಾಗಿದ್ದರು.