ಬೆಂಗಳೂರು, (www.thenewzmirror.com);
ವಿರಾಟ್ ಕೊಹ್ಲಿ ಬಾಂಗ್ಲಾದೇಶ ವಿರುದ್ಧ ಶತಕ ಬಾರಿಸುವ ಮೂಲಕ ವಿಶ್ವಕಪ್ ನಲ್ಲಿ ಅಬ್ಬರಿಸಿದ್ದಾರೆ. ಭಾರತದ ಮಾಜಿ ನಾಯಕ ವಿರಾಟ್ 97 ಎಸೆತಗಳಲ್ಲಿ 103 ರನ್ ಗಳಿಸಿದರು. ಆದರೆ ವಿರಾಟ್ ಕೊಹ್ಲಿ ಶತಕದ ಆಸೆಗಾಗಿ ಆಡುತ್ತಿರಲಿಲ್ಲ! ವಾಸ್ತವವಾಗಿ, ವಿರಾಟ್ ಕೊಹ್ಲಿ ಸಿಂಗಲ್ ತೆಗೆದುಕೊಂಡು ಇನ್ನೊಂದು ಬದಿಯಲ್ಲಿ ಇರಲು ಬಯಸಿದ್ದರು, ಆದರೆ ಕೆಎಲ್ ರಾಹುಲ್ ವಿರಾಟ್ ಕೊಹ್ಲಿಯನ್ನು ಹಾಗೆ ಮಾಡದಂತೆ ತಡೆದರು.
ಬಾಂಗ್ಲಾದೇಶ ವಿರುದ್ಧದ ಗೆಲುವಿನ ನಂತರ ಮಾತನಾಡಿರುವ ಕೆಎಲ್ ರಾಹುಲ್, ವಿರಾಟ್ ಕೊಹ್ಲಿಗೆ ಸಿಂಗಲ್ಸ್ ತೆಗೆದುಕೊಳ್ಳಲು ನಿರಾಕರಿಸಿದ್ದೇ. ಇದರ ನಂತರ ವಿರಾಟ್ ಕೊಹ್ಲಿ ತಮ್ಮ ಏಕದಿನ ವೃತ್ತಿಜೀವನದ 48 ನೇ ಶತಕವನ್ನು ಗಳಿಸಿದರು ಎಂದು ತಿಳಿಸಿದ್ದಾರೆ.
ಸಿಂಗಲ್ ತೆಗೆದುಕೊಳ್ಳುವುದಿಲ್ಲ ಎಂದು ನಾನು ವಿರಾಟ್ ಕೊಹ್ಲಿಗೆ ಹೇಳಿದ್ದಾಗಿ ಕೆಎಲ್ ರಾಹುಲ್ ತಿಳಿಸಿದ್ದಾರೆ. ನಂತರ ವಿರಾಟ್ ಕೊಹ್ಲಿ ಅವರು ಸಿಂಗಲ್ ತೆಗೆದುಕೊಳ್ಳದಿದ್ದರೆ ಜನರು ತಮ್ಮನ್ನು ನೋಡುವ ದೃಷ್ಟಿ ಬದಲಾಗುತ್ತದೆ ಎಂದು ತಿಳಿಸಿದ್ದರು. ಈ ರೀತಿ ಮಾಡುವ ಮೂಲಕ ನಾನು ನನ್ನ ವೈಯಕ್ತಿಕ ದಾಖಲೆಗಾಗಿ ಆಡುತ್ತಿದ್ದೇನೆ ಎಂದು ಜನರು ಹೇಳುತ್ತಾರೆ ಎಂದು ದೂಸಿಸುತ್ತಾರೆ ಎಂದು ಹೇಳಿದ್ದರು.
ಪಂದ್ಯದ ಬಳಿಕ ಮಾತನಾಡಿದ ಕೆಎಲ್, ನಾವು ಸುಲಭವಾಗಿ ಪಂದ್ಯ ಗೆಲ್ಲುತ್ತೇವೆ, ನೀವೂ ಶತಕ ಪೂರೈಸಬಹುದು ಎಂದು ತಿಳಿಸಿದ್ದೇ. ಆಗ ವಿರಾಟ್ ಕೊಹ್ಲಿ ಒಪ್ಪಿಕೊಂಡರು. ಇದಾದ ಬಳಿಕ ವಿರಾಟ್ ಕೊಹ್ಲಿ ಸಿಕ್ಸರ್ ಬಾರಿಸುವ ಮೂಲಕ ಶತಕ ಪೂರೈಸಿದರು. ಅಲ್ಲದೆ, ಭಾರತ ತಂಡ ಸತತ ನಾಲ್ಕನೇ ಗೆಲುವು ಸಾಧಿಸಿತು.
ಭಾರತ ತಂಡವು ಈಗ 4 ಪಂದ್ಯಗಳಲ್ಲಿ 8 ಅಂಕಗಳನ್ನು ಹೊಂದಿದೆ. ಆದರೆ ಭಾರತ ತಂಡ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಭಾರತ ಮತ್ತು ನ್ಯೂಜಿಲೆಂಡ್ 8-8 ಅಂಕಗಳನ್ನು ಹೊಂದಿವೆ, ಆದರೆ ಕಿವೀ ತಂಡದ ರನ್ ರೇಟ್ ಭಾರತಕ್ಕಿಂತ ಉತ್ತಮವಾಗಿದೆ. ಇದೀಗ ಭಾರತ ತಂಡ ನ್ಯೂಜಿಲೆಂಡ್ ಸವಾಲನ್ನು ಭಾನುವಾರ ಎದುರಿಸಲಿದೆ. ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯ ಅಕ್ಟೋಬರ್ 22 ರಂದು ಧರ್ಮಶಾಲಾದಲ್ಲಿ ನಡೆಯಲಿದೆ. ಇದಾದ ನಂತರ ಭಾರತ ತಂಡ ಇಂಗ್ಲೆಂಡ್, ಶ್ರೀಲಂಕಾ, ದಕ್ಷಿಣ ಆಫ್ರಿಕಾ ಮತ್ತು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ.