ಸೆಪ್ಟೆಂಬರ್ 26 ಬೆಂಗಳೂರು ಬಂದ್; ಏನಿರುತ್ತೆ ಏನಿರಲ್ಲ.?

ಬೆಂಗಳೂರು, (www.thenewzmirror.com);

ತಮಿಳುನಾಡಿಗೆ ಕಾವೇರಿ ನೀರು ಹರಿಬಿಟ್ಟಿರುವುದಕ್ಕೆ ರಾಜ್ಯಾದ್ಯಂತ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಹೀಗಾಗಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿಯಿಂದ ಸೆಪ್ಟೆಂಬರ್ 26 ಅಂದರೆ ಮಂಗಳವಾರದಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ.

RELATED POSTS

ಕುಡಿಯುವ ನೀರಿನ ಅಗತ್ಯತೆ ಅರಿಯದೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಅವೈಜ್ಞಾನಿಕ ಆದೇಶ ಖಂಡಿಸಲು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯ ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ ಸಂಘಟನೆಗಳ ಒಕ್ಕೂಟ, ಆಮ್ ಆದ್ಮಿ ಪಕ್ಷ, ಮತ್ತಿತರ ಸಂಘಟನೆಗಳ ಮುಖಂಡರು, ಪದಾಧಿಕಾರಿಗಳು ಒಟ್ಟಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾವೇರಿ ಹೋರಾಟದ ಜಾಗೃತಿ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಆಪ್ ರಾಜ್ಯಧ್ಯಕ್ಷ ಮುಖ್ಯಮಂತ್ರಿ ಚಂದ್ರು, ಮೇಕೆದಾಟು ಯೋಜನೆ ಜಾರಿಗೆ ಹೋರಾಟ ಮಾಡಿ ಅಧಿಕಾರಕ್ಕೆ ಬಂದು ಏನು ಕಡಿದು ಕಟ್ಟೆ ಹಾಕಿದ್ದೀರಾ, ಮೇಕೆದಾಟು ಯೋಜನೆ ಯಾಕೆ ಪ್ರಾರಂಭಿಸಿಲ್ಲ, ಇದರ ಬದಲಾಗಿ ನೀವು ಎಲ್ಲಿದ್ದೀರಿ ಎಂದು ನಮಗೆ ಪ್ರಶ್ನೆ ಮಾಡ್ತೀರಾ? ಅಧಿವೇಶನ ಕರೆದು ನೀರು ಬಿಡಲ್ಲ ಎಂದು ನಿರ್ಣಯ ಮಾಡಿ, ಸುಪ್ರೀಂಕೋರ್ಟ್‌ಗೂ ವಿಚಾರ ತಿಳಿಸಿ, ಕೋರ್ಟ್ ಛೀಮಾರಿ ಹಾಕಬಹುದು, ಜೈಲಿಗೆ ಹಾಕಬಹುದು, ಏನೇನಕ್ಕೋ ಜೈಲಿಗೆ ಹೋಗ್ತಿರಾ ರಾಜ್ಯದ ಹಿತಕ್ಕಾಗಿ ಜೈಲಿಗೆ ಹೋಗಲು ಆಗಲ್ಲವಾ  ಎಂದು ರಾಜ್ಯ ಸರ್ಕಾರದ ವಿರುದ್ಧ ಗುಡುಗಿದರು. ಹಾಗೆನೇ ನಾಡು, ನುಡಿ, ಜನ ರಕ್ಷಣೆ ಬಂದಾಗ ಆಮ್ ಆದ್ಮಿ ಪಕ್ಷ ಬೇಧಬಾವ ಇಲ್ಲದೆ ಹೋರಾಟ ಮಾಡುತ್ತದೆ. ಒಂದು ಕೋಟಿಗೂ ಹೆಚ್ಚು ಜನ ಬೆಂಗಳೂರಿನಲ್ಲಿದ್ದು, ಬೆಂಗಳೂರಿಗೆ 1450 ಎಂಎಲ್‌ಡಿ ನೀರು ಬೇಕು. ಒಬ್ಬ ವ್ಯಕ್ತಿಗೆ ಒಂದು ದಿನಕ್ಕೆ 150 ಲೀಟರ್ ನೀರು ಬೇಕು. ಆದರೆ, ಈಗ 108 ಲೀಟರ್ ಮಾತ್ರ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.

ಎಎಪಿ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ಮಾತನಾಡಿ, ಬೆಂಗಳೂರಿನ ಜನ ಬೀದಿಗಿಳಿಯುವುದು ಕಷ್ಟ ಎನ್ನಲಾಗುತ್ತದೆ. ಆದರೆ ಸ್ಟೀಲ್ ಫ್ಲೈ ಓವರ್ ವಿಚಾರದಲ್ಲಿ ಬೆಂಗಳೂರಿಗರು ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಮಾಡಿದ್ದರು, ಅಂತಹ ಕೆಲಸ ಮತ್ತೆ ಆಗಬೇಕು. ಮಾತ್ರವಲ್ಲದೆ ನಾವೇ ಜನರ ಬಳಿ ಹೋಗಿ ಸಹಿ ಸಂಗ್ರಹಣೆ ಮಾಡಿ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಬೇಕು. ಕರ್ನಾಟಕ ಜಲ ಸಂರಕ್ಷಣಾ ಸಮಿತಿ ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಎಪಿ ಸಂಪೂರ್ಣ ಬೆಂಬಲ ನೀಡುತ್ತದೆ ಎಂದು ಹೇಳಿದರು.

ಆಮ್ ಆದ್ಮಿ ಪಕ್ಷ, ರೈತ ಸಂಘಟನೆಗಳ ಒಕ್ಕೂಟ ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ ಮತ್ತಿತರ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.

ರಾಜ್ಯ ಕಬ್ಬುಬೆಳೆಗಾರರ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಮಾತನಾಡಿ, ಬೆಂಗಳೂರು ಬಂದ್ ಸಾಂಕೇತಿಕ ಹೋರಾಟವಾಗಿದ್ದು, ಆಗಲೂ ಸರ್ಕಾರ ಕ್ರಮ ವಹಿಸದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

ಬಂದ್ ದಿನ ಶಾಲಾ-ಕಾಲೇಜುಗಳು ಮಕ್ಕಳಿಗೆ ತೊಂದರೆಯಾಗದಂತೆ ರಜೆ ನೀಡುವ ಸಾಧ್ಯತೆಯಿದೆ. ಬೆಂಗಳೂರು ನಗರ ಸಂಪೂರ್ಣ ಬಂದ್ ಆಗೋ ಸಾಧ್ಯತೆ ಇದೆ. ಈ ವೇಳೆಯಲ್ಲಿ ತುರ್ತು ಸೇವೆ ಒದಗಿಸುವಂತ ಮೆಡಿಕಲ್, ಹಾಲಿನ ಬೂತ್, ಆಸ್ಪತ್ರೆಗಳು ಎಂದಿನಂತೆ ಓಪನ್ ಇರಲಿವೆ.

ಬಿಎಂಟಿಸಿ ಬಸ್ ಸಂಚಾರ ನಡೆಸೋದು ಡೌಟ್. ಕೆ ಎಸ್ ಆರ್ ಟಿಸಿ ಬಸ್ ಸಂಚಾರವೂ ಸ್ಥಗಿತಗೊಳ್ಳೋ ಸಾಧ್ಯತೆ ಇದೆ. ಅಂಗಡಿ ಮುಂಗಟ್ಟುಗಳು ಸ್ವಯಂ ಪ್ರೇರಿತವಾಗಿ ಬಂದ್ ಆಗಲಿದ್ದಾವೆ. ಖಾಸಗಿ ಬಸ್, ಆಟೋ, ಟ್ಯಾಕ್ಸಿ ಸಂಚಾರ ಸ್ಥಗಿತಗೊಳ್ಳೋ ಸಾಧ್ಯತೆ ಇದೆ.

ಬಂದ್ ದಿನ ಬೆಂಗಳೂರು ಬಹುತೇಕ ಸ್ಥಬ್ಧವಾಗಲಿದೆ. ಅಂದು ಬಹುತೇಕ ಬೆಂಗಳೂರು ಸ್ಥಬ್ಧಗೊಳ್ಳೋ ಸಾಧ್ಯತೆ ಇದೆ. ಬೆಂಗಳೂರು ಬಂದ್ ವೇಳೆ ಏನಿರುತ್ತೆ.? ಏನಿರಲ್ಲ ಅನ್ನೋದನ್ನ ನೋಡುವುದಾದರೆ..,

ಏನಿರಲ್ಲ..?
– ಆಟೋ
– ಮ್ಯಾಕ್ಸಿ ಕ್ಯಾಬ್
– ಹೊಟೇಲ್
– BMTC, KSRTC
– ಓಲಾ, ಊಬರ್
– ಲಾರಿ
– ಮ್ಯಾಕ್ಸಿ ಕ್ಯಾಬ್
– ಚಿಕ್ಕಪೇಟೆ ವ್ಯಾಪಾರಿಗಳು
– ಬಿಬಿಎಂಪಿ ಸೇವೆ ಸಿಗೋದಿಲ್ಲ
– ಖಾಸಗಿ ಶಾಲೆ, ಕಾಲೇಜುಗಳು

ಏನಿರುತ್ತೆ .?

– ಆಂಬುಲೆನ್ಸ್
– ತರಕಾರಿ, ಹಾಲು
– ಮೆಡಿಕಲ್ಸ್
– ಆಸ್ಪತ್ರೆ
– ಬ್ಯಾಂಕ್
– ನಮ್ಮ ಮೆಟ್ರೋ

50- 50

–  ಖಾಸಗಿ ಬಸ್
– ಏರ್ ಪೋರ್ಟ್ ಟ್ಯಾಕ್ಸಿ
– ಲಾರಿ ಮಾಲೀಕರು
– ಸರ್ಕಾರಿ ನೌಕರರು
– ಶಾಪಿಂಗ್ ಮಾಲ್
– ಸರ್ಕಾರಿ ಕಛೇರಿಗಳು
– ಏರ್ ಪೋರ್ಟ್ ಟ್ಯಾಕ್ಸಿ
– ಐಟಿ ಬಿಟಿ ಕಂಪನಿಗಳು

100 ಕ್ಕೂ ಹೆಚ್ಚು ಸಂಘಟನೆಗಳಿಂದ ಬೆಂಗಳೂರು ಬಂದ್ ಗೆ ಕರೆ ಕೊಟ್ಟಿರೋದ್ರಿಂದ ಇಡೀ ಬೆಂಗಳೂರು ಅಂದು ಸ್ಥಬ್ಧವಾಗುವ ಸಾಧ್ಯತೆಯಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist