ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಇನ್ನಿಲ್ಲ

ಬೆಂಗಳೂರು, (www.thenewzmirror.com );

ಕನ್ನಡದ ಅಮೃತವರ್ಷಿಣಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.

RELATED POSTS

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನ ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆಗೆ ಸ್ಪಂದಿಸದೆ ಇಂದು ನಿಧನ ಹೊಂದಿದ್ದಾರೆ.

ಇತ್ತೀಚಿಗೆ ಶರತ್ ಬಾಬು ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದ್ದರಿಂದ ಅವರನ್ನು ಬೆಂಗಳೂರಿನಿಂದ ಹೈದರಾಬಾದ್‍ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ನಟನಿಗೆ ಉಸಿರಾಡಲು ಕಷ್ಟವಾಗಿತ್ತು. ಹೀಗಾಗಿ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ವೈದ್ಯರ ಸತತ ಪ್ರಯತ್ನಗಳು ಫಲನೀಡದೆ ಶರತ್ ಬಾಬು ಇಹಲೋಕ ತ್ಯಜಿಸಿದ್ದಾರೆ.

1973 ರಲ್ಲಿ ಚಿತ್ರರಂಗ ಪ್ರವೇಶಿಸಿದ ಶರತ್ ಬಾಬು ತೆಲುಗು, ತಮಿಳು ಚಿತ್ರರಂಗದಲ್ಲಿ ಬಹು ಜನಪ್ರಿಯ ನಟರಾಗಿದ್ದವರು. ಸಿನಿಮಾ ನಾಯಕನಾಗಿ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಸುಮಾರು 4 ದಶಕಗಳಿಂದ ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಶರತ್ ಬಾಬು ಕನ್ನಡದಲ್ಲಿ ಸುಮಾರು 20ಕ್ಕಿಂತ ಹೆಚ್ಚು ಚಿತ್ರಗಳಲ್ಲಿ ಬಣ್ಣ ಹಚ್ಚಿದ್ದಾರೆ. ಅದರಲ್ಲೂ ರಮೇಶ್ ಅರವಿಂದ್ ಜೊತೆ ನಟಿಸಿದ ಅಮೃತವರ್ಷಿಣಿ ಸಿನಿಮಾ ಸೂಪರ್ ಹಿಟ್ ಆಗಿತ್ತು.

ಶರತ್ ಬಾಬು ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ.

ಇತ್ತೀಚೆಗೆ ಚಿತ್ರರಂಗದಿಂದ ತುಸು ಅಂತರ ಕಾಯ್ದುಕೊಂಡಿದ್ದ ಶರತ್ ಬಾಬು, ಕೊನೆಯದಾಗಿ ಪವನ್ ಕಲ್ಯಾಣ್ ನಟನೆಯ ವಕೀಲ್ ಸಾಬ್ ಸಿನಿಮಾದಲ್ಲಿ ಸಣ್ಣ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದರು. ಶರತ್ ಬಾಬು ರಮಾಪ್ರಭಾ ಮತ್ತು ಸ್ನೇಹಾ ನಂಬಿಯಾರ್ ಅವರನ್ನು ವಿವಾಹವಾಗಿದ್ದರೂ ಇಬ್ಬರಿಗೂ ವಿಚ್ಛೇದನ ನೀಡಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist