ಬೆಂಗಳೂರು, (www.thenewzmirror.com) ;
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯದ ಜನತೆಗೆ ಶಾಕ್ ಮೇಲೆ ಶಾಕ್ ಕೊಡುವ ಕೆಲಸವನ್ನ ಸರ್ಕಾರ ಮಾಡುತ್ತಿದೆ. ಚುನಾವಣೆ ಮುಗಿಯುತ್ತಿದ್ದಂತೆ ಹಾಲು, ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಿತ್ತು. ಇದೀಗ ಇದರ ಬೆನ್ನಲ್ಲೇ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಚಿಂತನೆ ನಡೆದಿದೆ.
ಇದರಕ್ಕೆ ಪೂರಕ ಎನ್ನುವಂತೆ ಮಾಹಿತಿ ನಿಒಡೊರುವ KSRTC ಅಧ್ಯಕ್ಷ ಶೀನಿವಾಸ್, ಶೀಘ್ರದಲ್ಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳ ಟಿಕೆಟ್ ದರ ಹೆಚ್ಚಾಗುವ ಕುರಿತು ಮುನ್ಸೂಚನೆ ಕೊಟ್ಟಿದ್ದಾರೆ.
ಶೇ.15ರಿಂದ 20ರಷ್ಟು ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ ಎಂದು ಮಾಹಿತಿ ನೀಡಿರೋ ಅವರು, ಇತ್ತೀಚೆಗೆ ನಡೆದ ಬೋರ್ಡ್ ಮೀಟಿಂಗ್ ನಲ್ಲಿ ಟಿಕೆಟ್ ದರ ಹೆಚ್ಚಳ ಮಾಡುವ ವಿಚಾರದ ಪ್ರಸ್ತಾವನೆ ಸರ್ಕಾರಕ್ಕೆ ಸಲ್ಲಿಸಿದ್ದೇವೆ. ಈ ಹಿಂದೆ 2019ರಲ್ಲಿ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಆಗಿತ್ತು. ಇಲ್ಲಿ ತನಕ ಟಿಕಟ್ ದರ ಹೆಚ್ಚಳ ಮಾಡದೆ 5 ವರ್ಷ ಆಗಿದೆ. ತೈಲ ಬೆಲೆ ಏರಿಕೆ ಆಗಿರುವುದರಿಂದ ದರ ಏರಿಕೆ ಅನಿವಾರ್ಯ. ನೌಕರರಿಗೆ ಸಂಬಳ ಹೆಚ್ಚಳ ಮತ್ತು ಸವಲತ್ತು ಕೊಡುವುದನ್ನು ಮಾಡಬೇಕಾದರೆ ದರ ಹೆಚ್ಚಳ ಆಗಲೇಬೇಕು ಎಂದು ತಿಳಿಸಿದರು.
ಕೆಎಸ್‌ಆರ್‌ಟಿಸಿ ನೌಕರರ ವೇತನ ಪರಿಷ್ಕರಣೆ 2020ರಲ್ಲಿ ಮಾಡಬೇಕಿತ್ತು. ಇಲ್ಲಿ ತನಕ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡುತ್ತೇವೆ. ಹಾಗಾಗಿ ಟಿಕೆಟ್ ದರ ಹೆಚ್ಚಳ ಆಗುತ್ತೆ. ಕಾಲಕಾಲಕ್ಕೆ ಹೆಚ್ಚಳ ಮಾಡಿದರೆ ಹೀಗೆಲ್ಲ ಆಗುತ್ತಿರಲಿಲ್ಲ.
ಕಳೆದ ತ್ರೈ ಮಾಸಿಕದಲ್ಲಿ ಕೆಎಸ್ಆರ್ಟಿಸಿಗೆ 295 ಕೋಟಿ ನಷ್ಟ ಆಗಿದೆ. 40 ಹೊಸ ವೋಲ್ವೋ ಬಸ್‌ಗಳಿಗೆ ಪ್ರಸ್ಥಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈಗಾಗಲೆ 600 ಸಾಮಾನ್ಯ ಬಸ್‌ಗಳನ್ನು ಕೊಂಡುಕೊಳ್ಳಲಾಗಿದೆ. 15%-20 ದರ ಹೆಚ್ಚಳ ಮಾಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಅಂತಿಮವಾಗಿ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ತೀರ್ಮಾನ ಮಾಡಲಿದ್ದು, ಶೀಘ್ರದಲ್ಲೇ ದರ ಏರಿಕೆ ಶಾಕ್ ರಾಜ್ಯದ ಜನತೆಗೆ ಆಗುತ್ತಾ ಕಾದು ನೋಡಬೇಕು.