ಎಸ್ಎಸ್ಎಲ್ಸಿ ಪರೀಕ್ಷೆ-03: ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣದ ಅವಕಾಶ ನೀಡಿದ ಬಿಎಂಟಿಸಿ

RELATED POSTS

ಬೆಂಗಳೂರು(www.thenewzmirror.com):ಎಸ್‌.ಎಸ್‌.ಎಲ್‌.ಸಿ ಪರೀಕ್ಷೆ-03 ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸಾಮಾನ್ಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಬಿಎಂಟಿಸಿ ಅನುಮತಿ ನೀಡಿದೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ. ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪರೀಕ್ಷೆ-03  ಬೇರೆ ಬೇರೆ ಶಾಲಾ/ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಉಚಿತ ಪ್ರಯಾಣ ಸೌಲಭ್ಯಗಳನ್ನು ಕಲ್ಪಿಸುತ್ತಿರುವುದಾಗಿ ತಿಳಿಸಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ದಿನಾಂಕ 05.07.2025 ರಿಂದ 12.07.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.

ಎಸ್.ಎಸ್.ಎಲ್.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು ಕಾರ್ಯಾಚರಣೆಗೊಳಿಸಲಾಗುವಂತೆ ಸೂಚಿಸಿದ್ದು,ಹೆಚ್ಚುವರಿ ಸುತ್ತುವಳಿಗಳ ಕಾರ್ಯಾಚರಣೆಯ ಅಗತ್ಯತೆ ಕಂಡುಬಂದಲ್ಲಿ ಕಾರ್ಯಾಚರಣೆ ಮಾಡಲುದಾಗಿ ತಿಳಿಸಿದೆ.ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು/ಪೋಷಕರು ಕೋರಿಕೆ ನಿಲುಗಡೆ ಕೋರಿದಲ್ಲಿ, ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ತಿಳಿಸಿದೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist