ಬೆಂಗಳೂರು, (www.thenewzmirror.com);
ಮಾರ್ಚ್ ಏಪ್ರಿಲ್ ನಲ್ಲಿ ನಡೆದಿದ್ದ SSLC ಪರೀಕ್ಷೆ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ.
ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೂ ನಡೆದಿದ್ದ SSLC ಪರೀಕ್ಷೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ ಫಲಿತಾಂಶ ಪ್ರಕಟವಾಗಲಿದೆ.
ಬೆಳಗ್ಗೆ 10 ಗಂಟೆಗೆ ಫಲಿತಾಂಶ ಪ್ರಕಟವಾಗಿದ್ದರೂ 11 ಗಂಟೆಯ ನಂತರ http://karresults.nic.in ವೆಬ್ ಸೈಟ್ ನಲ್ಲಿ ವಿದ್ಯಾರ್ಥಿಗಳು ನೋಡಬಹುದಾಗಿದೆ.