Political News | ರಾಜ್ಯಕ್ಕೆ ಕಳೆದ ಐದು ವರ್ಷಗಳಲ್ಲಿ 80,000 ಕೋಟಿ ಅನುದಾನ ಕೊರತೆ : ಸಿಎಂ

ಬೆಂಗಳೂರು, (www.thenewzmirror.com) ;

ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದೆ. ಹಾಗೆನೇ ಬೆಂಗಳೂರಿಗೆ 27 ಸಾವಿರ ಕೋಟಿ ರೂ. ಅನುದಾನ ಕೊಡುವಂತೆ ಮನವಿ ಮಾಡಿದ್ದು, ಇದಕ್ಕೆ ಸಕರಾತ್ಮಕವಾಗಿ ಸ್ಪಂದನೆ ಸಿಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ರು.

RELATED POSTS

ರಾಜ್ಯಕ್ಕೆ ಆಗಮಿಸಿರುವ 16ನೇ ಹಣಕಾಸು ಆಯೋಗದ ಮುಂದೆ ರಾಜ್ಯ ಸರ್ಕಾರ ಅನುದಾನ ಕೊರತೆ ಎದುರಿಸುತ್ತಿದ್ದು, ಬೆಂಗಳೂರಿಗೆ ಮುಂದಿನ 5 ವರ್ಷಗಳಲ್ಲಿ 55,586 ಕೋಟಿ ರೂ. ಅನುದಾನ ಅವಶ್ಯಕತೆ ಇದೆ. ಇದರಲ್ಲಿ 27,799 ಕೋಟಿ ರೂ. ಅನುದಾನ ಕೊಡುವಂತೆ ಹಣಕಾಸು ಆಯೋಗಕ್ಕೆ ಅವರು ಮನವಿ ಮಾಡಿದ್ದಾರೆ.

ಕಲ್ಯಾಣ ಕರ್ನಾಟಕದ ಸಮಾನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 25 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಆಯೋಗದಿಂದ 25 ಸಾವಿರ ಕೋಟಿ ರೂ. ಹೊಂದಾಣಿಕೆ ಅನುದಾನ ಬೇಕಿದೆ. ಇದರ ಜೊತೆಗೆ ಪಶ್ಚಿಮ ಘಟ್ಟಗಳ ಅತ್ಯಂತ ದುರ್ಬಲ ಪ್ರದೇಶಗಳಲ್ಲಿ ಪರಿಣಾಮಕಾರಿ ವಿಪತ್ತು ತಗ್ಗಿಸುವಿಕೆ ಮತ್ತು ಸಕಾಲ ಪರಿಹಾರ ಮತ್ತು ಪುನರ್ವಸತಿ ಕ್ರಮಗಳಿಗೆ 10 ಸಾವಿರ ಕೋಟಿ ರೂ. ಅನುದಾನದ ಬೇಡಿಕೆಯನ್ನ ಸಿಎಂ ಹಣಕಾಸು ಆಯೋಗದ ಮುಂದೆ ಇಟ್ಟಿದ್ದಾರೆ. ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ.

ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು ಕೋರಲಾಯಿತು. ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯಗಳಿಗೆ ದಂಡವಿಧಿಸಬಾರದು. ದೇಶದ ಜಿಡಿಪಿಗೆ ನಮ್ಮ ರಾಜ್ಯದಿಂದ ಶೇ.9 ರಷ್ಟು ಕೊಡುಗೆ ನೀಡುತ್ತಿದ್ದು, ಅದರಲ್ಲಿ ನಮಗೆ ಕೇವಲ ಶೇ. 1.5 ರಷ್ಟು ಮಾತ್ರ ರಾಜ್ಯದ ಪಾಲಿಗೆ ಬರುತ್ತಿದೆ. ಇದನ್ನು ಸರಿಪಡಿಸಲು ಕೋರಲಾಗಿದೆ. 14 ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ 4.713 ಪ್ರಮಾಣದ ತೆರಿಗೆ ಹಂಚಿಕೆಯಾಗುತ್ತಿತ್ತು. ಆದರೆ 15ನೇ ಹಣಕಾಸು ಆಯೋಗದಲ್ಲಿ ಈ ಪ್ರಮಾಣ 3.647 ಕ್ಕೆ ಇಳಿದಿದ್ದು, ಈ ಪ್ರಮಾಣವನ್ನೂ ಸರಿಪಡಿಸಬೇಕೆಂದು ಕೋರಲಾಗಿದೆ. ತೆರಿಗೆ ಪ್ರಮಾಣದಲ್ಲಿ 1.66 % ಕಡಿಮೆಯಾಗಿರುವ ಬಗ್ಗೆ ಆಯೋಗಕ್ಕೆ ವಿವರಣೆ ನೀಡಲಾಗಿದೆ ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist