ಹೆಚ್ಚುದರ ವಸೂಲಿ ಮಾಡುವ ಆಟೋಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ:ರಾಮಲಿಂಗಾರೆಡ್ಡಿ ಸೂಚನೆ

RELATED POSTS

ಬೆಂಗಳೂರು(www.thenewzmirror.com):ಬೆಂಗಳೂರು ನಗರದಲ್ಲಿ ಸರ್ಕಾರ ನಿಗದಿ ಮಾಡಿರುವ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡುತ್ತಿರುವ ಆಪ್ (APP) ಆಧಾರಿತ ಆಟೋಗಳಾಗಲಿ ಅಥವಾ ಇನ್ನಾವುದೇ ಮಾದರಿಯ ಆಟೋಗಳಾಗಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ.

ಪ್ರಯಾಣಿಕರಿಂದ ನಿಗದಿಕ್ಕಿಂತ ದರಕ್ಕಿಂತ ಹೆಚ್ಚಿನ ದರದ ಬೇಡಿಕೆ, ಹೆಚ್ಚಿನ ದರ ನೀಡದಿದ್ದಲ್ಲಿ ಪ್ರಯಾಣವನ್ನು ರದ್ದುಗೊಳಿಸುವುದು ಹಾಗೂ ಅತೀ ಹೆಚ್ಚಿನ ದರ ವಸೂಲು ಮಾಡುತ್ತಿರುವ ಪ್ರಕರಣಗಳ ಬಗ್ಗೆ ದೂರು ಬಂದಲ್ಲಿ ತ್ವರಿತಗತಿಯಲ್ಲಿ ಕ್ರಮಕೈಗೊಂಡು ಅಂತಹ ಆಟೋಗಳ ಪರ್ಮಿಟ್ ರದ್ದು ಮಾಡುವುದರ ಜೊತೆಗೆ ಪ್ರಕರಣ ದಾಖಲಿಸಬೇಕು ಎಂದು ಸಾರಿಗೆ ಇಲಾಖೆ ಆಯುಕ್ತರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಉದಾಹರಣೆಯೊಂದನ್ನು ಉಲ್ಲೇಖಿಸಿರುವ ಸಚಿವರು, ದಿನಾಂಕ 18 ನೇ ಜೂನ್ 2025 ರಂದು ರಂದು ರಾಪಿಡೋ ಆಟೋ ಅಪ್ ಪ್ರತಿಕಿ.ಮೀ ರೂ.100.89, ಅದೇ ಆಟೋ ಓ ಆ್ಯಪ್ ಅವರು 4 ಕಿ.ಮೀ ದೂರದ ಪ್ರಯಾಣಕ್ಕೆ ರೂ. 184.19 ತೆಗೆದುಕೊಂಡಿರುತ್ತಾರೆ. ಸಾರ್ವಜನಿಕರಿಂದ ಈ ರೀತಿಯ ಹಗಲು ದರೋಡೆ ಅಕ್ಷಮ್ಮ ಕಠಿಣ ಕ್ರಮ ಜರೂರಾಗಿ ಜರುಗಿಸಬೇಕು ಎಂದು ಸೂಚಿಸಿದ್ದಾರೆ.

ಈಗಾಗಲೇ ಬಾಡಿಗೆಗೆ ನಿರಾಕರಣೆ, ಅಧಿಕ ಬಾಡಿಗೆಗೆ ಒತ್ತಾಯಿಸಿದ ಆಟೋ ಚಾಲಕರ ವಿರುದ್ಧ ಪ್ರಕರಣಗಳನ್ನು ಸಾರಿಗೆ ಇಲಾಖೆಯು ದಾಖಲಿಸುತ್ತಿದ್ದಾಗ್ಯೂ ಸಹ, ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ನಿಗದಿತ ದರಕ್ಕಿಂತ ಹೆಚ್ಚು ದರ ವಸೂಲಿ ಮಾಡಿರುವ ದೂರುಗಳಿಗೆ ಸಂಬಂಧಪಟ್ಟಂತೆ ಸಾರ್ವಜನಿಕರು ಕಳುಹಿಸಿರುವ ಮೊಬೈಲ್ ಸ್ಟ್ರೀನ್ ಶಾಟ್ ಪ್ರತಿಗಳನ್ನು ಲಗತ್ತಿಸಿ ಕ್ರಮಕ್ಕೆ ಸೂಚಿಸಿದ್ದಾರೆ.

ಸಾರ್ವಜನಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕೂಡಲೇ ಪರಿಣಾಮಕಾರಿಯಾದ ಕಾರ್ಯ ಯೋಜನೆ ರೂಪಿಸಿ ತಪ್ಪಿತಸ್ಥ ಆಟೋ ಚಾಲಕರ/ ಮಾಲೀಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist