ರಾಜಕೀಯ ಎಂಟ್ರಿ ಆಗುತ್ತಿದ್ದಂಗೆ ಸಿನೆಮಾ ರಂಗಕ್ಕೆ ಗುಡ್ ಬೈ ಹೇಳ್ತಾರಾ ತಲಪತಿ ವಿಜಯ್.?

ಬೆಂಗಳೂರು, (www.thenewzmirror.com);

ತಮಿಳು ನಟ ತಲಪತಿ‌ ವಿಜಯ್ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ ಇದರ ಬೆನ್ನಲೇ ಅಭಿಮಾನಿಗಳಿಗೆ ಬಿಗ್ ಶಾಕ್ ಎದುರಾಗಿದ್ದು, ಚಿತ್ರರಂಗಕ್ಕೆ ದಳಪತಿ ವಿಜಯ್ ಗುಡ್ ಬೈ ಹೇಳಿದ್ದಾರೆ ಎಂದು ಹೇಳಲಾಗಿದೆ.

RELATED POSTS

ತಮಿಳು ನಟ ತಲಪತಿ ವಿಜಯ್ ರಾಜಕೀಯ ಪ್ರವೇಶಿಸಿದ್ದು, ತಮ್ಮ ಪಕ್ಷಕ್ಕೆ ತಮಿಳಗ ವೆಟ್ರಿ ಕಳಗಂ ಎಂದು ನಾಮಕರಣ ಮಾಡಿದ್ದಾರೆ. ನಟ ವಿಜಯ್ ತಮಿಳುನಾಡು ಮತ್ತು ಕೇರಳದಲ್ಲಿ ಅಪಾರ ಅಭಿಮಾನಿಗಳನ್ನ ಹೊಂದಿದ್ದಾರೆ ಮತ್ತು ಹಲವಾರು ಸಾರ್ವಜನಿಕ ಕಲ್ಯಾಣ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ದಳಪತಿ ವಿಜಯ್ ಅವರು ರಾಜಕೀಯಕ್ಕೆ ಧುಮುಕಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದಾರೆ. ಇದು ತಮಿಳುನಾಡಿನ ಸಿನಿಮಾ ಹಾಗೂ ರಾಜಕೀಯದಲ್ಲಿ ಹೊಸ ತಿರುವು ತರಲಿದೆ ಎಂದು ಭಾವಿಸಲಾಗಿದೆ.

ವಿಜಯ್ ಅವರು ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆ(Tamil Nadu Assembly Elaction)ಯ ಮೇಲೆ ಕಣ್ಣಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ವಿಜಯ್ ಅವರ ಪಕ್ಷವು 2026ರ ತಮಿಳುನಾಡು ಚುನಾವಣೆಯಲ್ಲಿ ಸ್ಪರ್ಧಿಸಲಿದೆ. ನಟ ವಿಜಯ್ ಅವರು ಅವರನ್ನು ತಮ್ಮ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು, ಚುನಾವಣಾ ಆಯೋಗದಲ್ಲಿ ಪಕ್ಷದ ಹೆಸರನ್ನು ನೋಂದಣಿ ಮಾಡಿದ್ದಾರೆ. ಮಾರು 200 ಸದಸ್ಯರು ಪಾಲ್ಗೊಂಡಿದ್ದ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ಸದ್ಯ ವಿಜಯ್ ಎರಡು ಸಿನೆಮಾಗಳನ್ನ ಒಪ್ಪಿಕೊಂಡಿದ್ದು 2 ಸಿನಿಮಾಗಳು ಕಂಪ್ಲೀಟ್ ಆದ ಬಳಿಕ ಸಂಪೂರ್ಣವಾಗಿ ಸಿನಿಮಾರಂಗವನ್ನು ಬಿಡುತ್ತೇನೆ ಎಂದು ವಿಜಯ್ ಹೇಳಿದ್ದಾರಂತೆ. ಒಂದು ವೇಳೆ ಅದು ನಿಜ ಆಗಿದ್ದೇ ಆದರೆ ಗೋಟ್ ವಿಜಯ್ ಅವರ ಕೊನೆ ಸಿನಿಮವಾಗಲಿದೆ.

ವೆಂಕಟ್ ಪ್ರಬಾಹು ನಿರ್ದೇಶನದ ‘ದಿ ಗ್ರೇಟೆಸ್ಟ್ ಆಫ್ ಆಲ್ ಸಾರ್ವಂ’ (ಜಿಒಟಿ) ಚಿತ್ರದ ಚಿತ್ರೀಕರಣದಲ್ಲಿರುವ ನಟ ವಿಜಯ್ ಇಂದು ತಮ್ಮ ಪಕ್ಷದ ಹೆಸರನ್ನು ಬಹಿರಂಗಪಡಿಸುವ ಮೂಲಕ ತಮ್ಮ ರಾಜಕೀಯ ಪ್ರವೇಶವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.

ದಳಪತಿ ವಿಜಯ್ ಅವರು ರಾಜಕೀಯಕ್ಕೆ ಎಂಟ್ರಿ ನೀಡಲಿ, ಅವರಿಂದ ಸಮಾಜದಲ್ಲಿ ಬದಲಾವಣೆ ಬರಲಿ ಎಂಬುದು ಅಭಿಮಾನಿಗಳ ಆಸೆಯೂ ಆಗಿತ್ತು. ಅದಕ್ಕಾಗಿ ದಳಪತಿ ವಿಜಯ್ ಅವರು ಸಿನಿಮಾ ರಂಗಕ್ಕೆ ವಿದಾಯ ಹೇಳಿ ರಾಜಕೀಯಕ್ಕೆ ಎಂಟ್ರಿ ನೀಡಿದ್ದಾರೆ.

ಕಾಲಿವುಡ್ನಲ್ಲಿ ದಳಪತಿ ವಿಜಯ್ ಅವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಅವರ ಸಿನಿಮಾಗಳು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಭಾರಿ ಸದ್ದು ಮಾಡುತ್ತವೆ. ವಿಜಯ್ ಅವರ ಈ ನಿರ್ಧಾರದಿಂದ ತಮಿಳು ಚಿತ್ರರಂಗಕ್ಕೆ ಒಂದು ಮಟ್ಟಿಗೆ ಹೊಡೆತ ಬೀಳಬಹುದು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist