ಬೆಂಗಳೂರು(www.thenewzmirror.com):ಆಕಾಂಕ್ಷ ನಿಗೂಡ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುಂತೆ ನಾನು ಪಂಜಾಬ್ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು,ಧರ್ಮಸ್ಥಳ ಮೂಲದ ವಿದ್ಯಾರ್ಥಿನಿ ಆಕಾಂಕ್ಷ ಪಂಜಾಬ್ ನಲ್ಲಿ ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿ. ಇದೊಂದು ಅಸಹಜ ಸಾವು ಎಂಬುದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ. ಉಪನ್ಯಾಸಕ ಮ್ಯಾಥ್ಯೂ ಅವರ ಕಿರುಕುಳದಿಂದ ಆಕಾಂಕ್ಷ ಸಾವಿಗೀಡಾಗಿದ್ದಾರೆ ಎಂದು ಅವರ ಕುಟುಂಬ ವರ್ಗದವರು ಆರೋಪಿಸಿದ್ದಾರೆ. ಆಕಾಂಕ್ಷ ನಿಗೂಡ ಸಾವಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ತನಿಖೆ ನಡೆಸುಂತೆ ನಾನು ಪಂಜಾಬ್ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದರು.
ಪ್ರಕರಣ ಕುರಿತು ನಾನು ರಾಜ್ಯ ಮುಖ್ಯಕಾರ್ಯದರ್ಶಿ ಅವರೊಂದಿಗೆ ಚರ್ಚೆ ನಡೆಸಿದ್ದು, ಪಂಜಾಬ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆಕಾಂಕ್ಷ ಮೃತದೇಹವನ್ನು ಕುಟುಂಬ ವರ್ಗದವರಿಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಸೂಚನೆ ನೀಡಿದ್ದೇನೆ. ಅಲ್ಲದೇ ಆಕಾಂಕ್ಷ ನಿಗೂಡ ಸಾವಿನ ಕುರಿತು ಸೂಕ್ತ ತನಿಖೆ ನಡೆಸುವ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ಮಾತನಾಡುವಂತೆ ಸೂಚಿಸಿದ್ದೇನೆ. ಈ ನಿಟ್ಟಿನಲ್ಲಿ ಪಂಜಾಬ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರೊಂದಿಗೆ
ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಚರ್ಚೆ ನಡೆಸಿದ್ದು, ಪಂಜಾಬ್ ನ ಜಲಂಧರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆಕಾಂಕ್ಷ ಅವರ ಕುಟುಂಬದ ಬೆಂಬಲಕ್ಕೆ ರಾಜ್ಯ ಸರ್ಕಾರ ನಿಲ್ಲಲಿದ್ದು, ಸರ್ಕಾರದಿಂದ ಅಗತ್ಯ ಸಹಕಾರ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.