Govt News |ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ –  ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು, (www.thenewzmirror.com) ;

ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ  ಸರ್ಕಾರದ ಹಾಗೂ  ಬಿಜೆಪಿ, ಜೆಡಿಎಸ್ ಪಕ್ಷದ  ಕೈಗೊಂಬೆಯಾಗಿ ಕೆಲಸ  ಮಾಡುತ್ತಿದ್ದಾರೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ತಿಳಿಸಿದರು.

RELATED POSTS

ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ , ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ  ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು  ಮುಖ್ಯಮಂತ್ರಿಗಳು ತಿಳಿಸಿದರು.

ನೋಟೀಸನ್ನು ಹಿಂಪಡೆಯಬೇಕೆಂದು ರಾಜ್ಯಪಾಲರಿಗೆ ಸಲಹೆ ನೀಡಲು ನಿರ್ಧಾರ*
ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಿನ್ನೆ
ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು  ಸಭೆಗೆ  ಹೋಗದೇ,  ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು  ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಅದನ್ನು  ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.

ಟಿ. ಜೆ.ಅಬ್ರಹಾಂ  ಒಬ್ಬ ಬ್ಲಾಕ್ ಮೈಲರ್. ಆತನ ದೂರಿನ ಮೇಲೆ ಕ್ರಮ ಕೈಗೊಂಡಿರುವುದು ಕಾನೂನು ಬಾಹಿರವಾದ ವಿಚಾರ. ಆತ ಈ ರೀತಿ ಅನೇಕ ಜನರ ಮೇಲೆ ದೂರುಗಳನ್ನು ನೀಡಿದ್ದಾರೆ. ನಾನು ಯಾವುದೇ ಅಪರಾಧವನ್ನು  ಮಾಡಿಲ್ಲ. ದಿನಾಂಕ :  26-7.2024 ರಂದು 11.30 ಗೆ  ದೂರು ನೀಡಿದ್ದು, ಅಂದೇ ರಾಜ್ಯಪಾಲರು ಶೋಕಾಸ್ ನೋಟಿಸ್ ಕೊಟ್ಟಿದ್ದಾರೆ. ಒಂದೇ ದಿನದಲ್ಲಿ ಕಾನೂನು ವಿಷಯವನ್ನು ಒಳಗೊಂಡ ವಿಚಾರವನ್ನು, 136 ಜನ ಶಾಸಕರನ್ನು ಜನ ಆಶೀರ್ವಾದ  ಮಾಡಿ ಕಳಿಸಿರುವ  ಚುನಾಯಿತ ಸರ್ಕಾರದ ಮುಖ್ಯಮಂತ್ರಿಗೆ ನೋಟೀಸು ಕೊಡುವಾಗ ಎಲ್ಲಾ ಕಾನೂನನ್ನು ಕೂಲಂಕುಷವಾಗಿ ಪರಿಶೀಲಿಸಬೇಕು. ಏನು ನೋಡದೇ ಆತುರವಾಗಿ ಕೆಲಸ  ಮಾಡಿದ್ದಾರೆ ಎಂದು ತಿಳಿಸಿದ್ರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist