ಬೆಂಗಳೂರು(www.thenewzmirror.com):ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿದ ಸಿಎಂ ಸಿದ್ದರಾಮಯ್ಯ ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ನಂತರ ಮಾತನಾಡಿದ ಅವರು,ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ
ಮಾನವ, ಆನೆ ಸಂಘರ್ಷ ತಡೆಯುವುದರಿಂದ ಜೀವ ಹಾನಿ, ಬೆಳೆ ಹಾನಿ ತಪ್ಪುತ್ತದೆ. ಈ ಮಹತ್ವದ ಉದ್ದೇಶದಿಂದಲೇ ರಾಜ್ಯದಿಂದ ಆರು ಕುಮ್ಕಿ ಆನೆಗಳನ್ನು ಆಂಧ್ರಕ್ಕೆ ಹಸ್ತಾಂತರಿಸಲಾಗುತ್ತದೆ ಎಂದರು.