ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ: ಸಿಎಂ

RELATED POSTS

ಹೊಸಪೇಟೆ(www.thenewzmirror.com): ನಮ್ಮದು ನುಡಿದಂತೆ ನಡೆಯುತ್ತಿರುವ ಸರ್ಕಾರ,142 ಭರವಸೆಗಳನ್ನು  ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಯನ್ನೂ ಈಡೇರಿಸುತ್ತೇವೆ, ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡುಗಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಕಂದಾಯ ಇಲಾಖೆ ಆಯೋಜಿಸಿರುವ “ಸಮರ್ಪಣೆ ಸಂಕಲ್ಪ” ಸಮಾವೇಶದಲ್ಲಿ 111111 ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿ, ಉಕ್ಕಿನ ಮಹಿಳೆ ಇಂದಿರಾಗಾಂಧಿಯವರ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ,ಈಗ ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು  ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆ ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು. 

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ನಷ್ಟ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ  ರಾಜ್ಯದ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಸರ್ಕಾರ ತಮ್ನ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ. 15 ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು. 

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ:

ರಾಜ್ಯದಲ್ಲಿ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಆಯ್ಕೆಯೇ ಆಗಿಲ್ಲ,ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ ಇದರು ಸ್ವತಂತ್ರ ಅಧಿಕಾರ ಅವರಿಗೆ ಸಾಧ್ಯವಿಲ್ಲ ಎನ್ನುವುದಕ್ಕೆ ನಿದರ್ಶನ ಎಂದರು.

ಬಿಜೆಪಿಯ ಕಮಿಷನ್ ಭ್ರಷ್ಟಾಚಾರ ಸಾಭೀತಾಗಿದೆ:

ಹಿಂದಿನ ಬಿಜೆಪಿ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು, ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ ಕಮಿಷನ್ ವ್ಯವಹಾರ ಸಾಬೀತಾಗಿದೆ ಎಂದರು.

ಚಿನ್ನದ ಬೆಲೆ ಈಗ ಎಷ್ಟಿದೆ?:

2014 ರಲ್ಲಿ 10000 ಇದ್ದ ಚಿನ್ನದ ಬೆಲೆ ಈಗ ಲಕ್ಷ ಆಗಿದೆ. ಗ್ಯಾಸ್ ಬೆಲೆ 400 ಇದ್ದದ್ದು ಈಗ 850 ಆಗಿದೆ. ಡೀಸೆಲ್, ಪೆಟ್ರೋಲ್, ಎಣ್ಣೆ, ಕಾಳು, ಬೇಳೆ, ರಸಗೊಬ್ಬರ ಎಲ್ಲದರ ಬೆಲೆಯನ್ನೂ ಆಕಾಶಕ್ಕೆ ಏರಿಸಿರುವ ಕೇಂದ್ರದ ಮೋದಿಯವರ ಸರ್ಕಾರದ ವಿರುದ್ಧ ಜನಾಕ್ರೋಶ ಇದೆಯೇ ಹೊರತು ನಮ್ಮ ಸರ್ಕಾರದ ಪರವಾಗಿ ಜನಾಭಿಪ್ರಾಯ ಇದೆ.ಹೀಗಾಗಿ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಕಾರ್ಯಕ್ರಮವೇ ನಕಲಿ ಎಂದರು. 

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist