ಬೆಂಗಳೂರು/ಮುಂಬೈ, (www.thenewzmirror.com) ;
ಮುಂಬೈ ನಗರ ಹೃದಯವಿದ್ರಾವಕ ಘಟನೆಗೆ ಸಾಕ್ಷಿಯಾಗಿದೆ. ಮೀನು ತರಲೆಂದು ಪತಿಯ ಜೊತೆ ಬೈಕ್ನಲ್ಲಿ ತೆರಳಿದ್ದಾಗ ಬಿಎಂಡಬ್ಲ್ಯೂ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ.

ಮುಂಬೈನ ವರ್ಲಿಯ ಕೋಳಿವಾಡ ಪ್ರದೇಶದಲ್ಲಿ ಮಹಿಳೆ ಮೀನು ಖರೀದಿ ಮಾಡಿ ಮನೆಗೆ ಹಿಂದಿರುಗುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಅವರ ಬೈಕ್ ಪಲ್ಟಿಯಾಗಿ ಪತಿ-ಪತ್ನಿ ಇಬ್ಬರೂ ಕಾರಿನ ಬಾನೆಟ್ ಮೇಲೆ ಬಿದ್ದಿದ್ದರು.
ತನ್ನನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ ಪತಿ ಬಾನೆಟ್ನಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ, ಆದರೆ ಮಹಿಳೆಗೆ ಸಾಧ್ಯವಾಗಲಿಲ್ಲ. ಗಾಯಗೊಂಡ ಮಹಿಳೆಯನ್ನು ಸ್ಥಳದಲ್ಲೇ ಬಿಟ್ಟು ಕಾರಿನ ಚಾಲಕ ಪರಾರಿಯಾಗಿದ್ದಾನೆ. ಗಾಯಗೊಂಡ ಮಹಿಳೆಯನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತು ಆದರೆ ಅಷ್ಟೊರೊಳಗೆ ಅವರು ಸಾವನ್ನಪ್ಪಿದ್ದರು.
ಸದ್ಯ ಪತಿ ಚಿಕಿತ್ಸೆ ಪಡೆಯುತ್ತಿದ್ದು, ಹಿಟ್ ಅಂಡ್ ರನ್ ಪ್ರಕರಣದ ತನಿಖೆಯನ್ನು ಆರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.