ಸಾರಿಗೆ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಬೆಂಗಳೂರು, (www.thenewzmirror.com);

ಸಾರಿಗೆ ನೌಕರರ ಬಹುದಿನದ ಕನಸಿಗೆ ಸಾರಿಗೆ ಸಚಿವರು ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಸಾರಿಗೆ ಸಂಸ್ಥೆಗಳಲ್ಲಿ‌ ಕಳೆದ 8 ವರುಷಗಳಿಂದ ಅಂದರೆ 2016 ರಲ್ಲಿನ  ನೇಮಕಾತಿ ನಂತರ ಯಾವುದೇ ನೇಮಕಾತಿ ಆಗಿರಲಿಲ್ಲ. ಇದೀಗ ಈ ಪ್ರಕ್ರಿಯೆಗೆ ಇದೀಗ ಹಸಿರು ನಿಶಾನೆ ಸಿಕ್ಕಿದೆ‌

RELATED POSTS

4  ಸಾರಿಗೆ ಸಂಸ್ಥೆಗಳಲ್ಲಿ 2016 ರಿಂದ ಇಲ್ಲಿಯವರೆಗೆ  ಸಿಬ್ಬಂದಿಗಳ ನಿವೃತ್ತಿ ಹಾಗೂ ಇತರೆ ಕಾರಣಗಳಿಂದ 13669 ಖಾಲಿ ಹುದ್ದೆಗಳಿದ್ದವು. ಇದರಲ್ಲಿ 13000 ಚಾಲನಾ  ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸಾರಿಗೆ ಸಂಸ್ಥೆಗಳಿಗೆ  ಅನುಮತಿ ನೀಡುವಂತೆ ಸರ್ಕಾರಕ್ಕೆ ಕೋರಲಾಗಿತ್ತು.

ಇದೋಗ ಸರ್ಕಾರ ಅನುಮೋದನೆ ಕೊಟ್ಟಿದ್ದು, ಮೊದಲನೇ ಹಂತದಲ್ಲಿ 6500 ಚಾಲನಾ ಸಿಬ್ಬಂದಿಗಳಿಗೆ ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರಕಿದೆ.

ನಿಗಮವಾರು ನೇಮಕಾತಿ ವಿವರ ಹೀಗಿದೆ

KSRTC: ಡ್ರೈವರ್ ಕಮ್ ಕಂಡಕ್ಟರ್ : 2000
ತಾಂತ್ರಿಕ ಸಿಬ್ಬಂದಿ : 300

NWKRTC :  ಡ್ರೈವರ್ ಕಮ್ ಕಂಡಕ್ಟರ್ 2000

BMTC : ಕಂಡಕ್ಟರ್ 2500

KKRTC ಅಲ್ಲಿ ಈಗಾಗಲೇ 1619 ಚಾಲನಾ ಸಿಬ್ಬಂದಿಗಳ ನೇಮಕಾತಿ‌ ಪ್ರಕ್ರಿಯೆ  ‌ಪ್ರಾರಂಭವಾಗಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದ್ದು, ಜನವರಿ 2024 ರ ಕೊನೆಯಲ್ಲಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆಗೊಳಿಸಲಾಗುವುದು. ಹಾಗೂ
KKRTC ಯಲ್ಲಿ 300 ಕಂಡಕ್ಟರ್ ಗಳ ನೇಮಕಾತಿಗೆ ಅನುಮತಿ ದೊರಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿದೆ.

ಒಟ್ಟಾರೆ 8719 ಚಾಲನಾ‌ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಚಾಲನೆ ದೊರಕಿದೆ

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist