ಬೆಂಗಳೂರು, (www.thenewzmirror.com) :
ಸರ್ಕಾರಿ ನೌಕರರ ಸರಿಸಮಾನ ವೇತನ ಸೇರಿದಂತೆ ಹಲವು ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮಾರ್ಚ್ 4 ರಿಂದ ಅನಿರ್ದಿಷ್ಟಾವಧಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಧರಣಿ ಮಡೆಯಲಿದ್ದು, ಅಂದಿನಿಂದ ಸಾರಿಗೆ ಓಡಾಟದಲ್ಲಿ ವ್ಯತ್ಯಯವಾಗಲಿದೆ.
ಈ ಹಿಂದಿನ ಸಾರಿಗೆ ನೌಕರರ ಹಿಂದಿನ ಮುಷ್ಕರಗಳಲ್ಲಿ ಸಿಬ್ಬಂದಿ ಮೇಲೆ ದಾಖಲಾದ ಪ್ರಕರಣ ಹಿಂಪಡೆಯಬೇಕು. ನಮಗೂ ಸರಿಸಮಾನ ವೇತನ, ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿರುವ ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ ವತಿಯಿಂದ ಈ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕ ವೇದಿಕೆ ಮಾಹಿತಿ ನೀಡಿದೆ.
ಈಗಾಗಲೇ 60ಕ್ಕೂ ಹೆಚ್ಚು ಕೇಸ್ ರದ್ದು ಮಾಡಬೇಕು ಎಂದು ಇದೇ ವೇಳೆ ವೇದಿಕೆ ಆಗ್ರಹಿಸಿದೆ. 2020ರ ಜ.1ರಿಂದ ಅನ್ವಯವಾಗುವಂತೆ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಒಂದೇ ಕಂತಿನಲ್ಲಿ ವೇತನದ ಹಿಂಬಾಕಿ ಪಾವತಿಸಬೇಕು. ಅಲ್ಲದೇ 2020ರಿಂದ ನಿವೃತ್ತಿಯಾದ ನೌಕರರಿಗೆ ವೇತನ ವಿಮರ್ಶೆ ಮಾಡಿ ಬಾಕಿ, ಹಿಂಬಾಕಿ ಮೊತ್ತವನ್ನು ತ್ವರಿತವಾಗಿ ಪಾವತಿ ಮಾಡಬೇಕು ಎಂದು ವೇದಿಕೆ ಗೌರವಾಧ್ಯಕ್ಷ ಬಿ.ಎಸ್.ಸುರೇಶ್ ಆಗ್ರಹಿಸಿದರು.
ಉಚಿತ ಆರೋಗ್ಯ ಭಾಗ್ಯ ಯೋಜನೆ ಜಾರಿಗೊಳಿಸಬೇಕು. ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿರುವಂತೆ ಸಮಾನ ವೇತನ ಮತ್ತು ಸೌಲ ಸೌಭ್ಯವನ್ನು ಸಾರಿಗೆ ನೌಕರರಿಗೂ ಸರ್ಕಾರ ವಿಸ್ತರಣೆ ಮಾಡಬೇಕು. ದಿ ಕಾರ್ಮಿಕರ ಸಂಸ್ಥೆಗೆ ಕೂಡಲೇ ಚುನಾವಣೆ ನಡೆಸಿ, ಮಾನ್ಯತೆ ಪ್ರಶ್ನೆ ಇತ್ಯರ್ಥಗೊಳಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದರು.ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರಕ್ಕೆ ಒತ್ತಡ ತರಲು ಅನಿರ್ದಿಷ್ಟಾವಧಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.