ಬೆಂಗಳೂರು, (www.thenewzmirror.com) :
ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ FSL ವರದಿ ಬಹಿರಂಗವಾಗಿದೆ. ಆದರೆ ಖಾಸಗಿ ಸಂಸ್ಥೆಗಳ FSL ವರದಿಗಳಿಗೆಲ್ಲಾ ಸರ್ಕಾರ ಮಾನ್ಯತೆ ಕೊಡುವುದಿಲ್ಲ. ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
BJP ಖಾಸಗಿ ಸಂಸ್ಥೆಯೊಂದರ FSL ವರದಿಯನ್ನು ತಂದಿಟ್ಟು ರಾಜ್ಯದ ಜನರ ದಿಕ್ಕು ತಪ್ಪಿಸಿದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆ ನೀಡುವ ವರದಿಯೇ ಅಧಿಕೃತ ಎಂದರು.