ಬೆಂಗಳೂರು, (www.thenewzmirror.com) ;
ಸುದ್ದಿ ವಾಹಿನಿ ಪವರ್ ಟಿವಿ ಪ್ರಸಾರಕ್ಕೆ ನಿರ್ಬಂಧ ಹೇರಿದ್ದರಾಜ್ಯ ಹೈಕೋರ್ಟ್ ಆದೇಶಕ್ಕೆ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಆ ಮೂಲಕ ಕಳೆದ ಹಲವು ದಿನಗಳಿಂದ ಸ್ಥಗಿತಗೊಂಡಿದ್ದ ಕನ್ನಡ ಸುದ್ದಿ ವಾಹಿನಿ ಪವರ್ ಟಿವಿ ಮತ್ತೆ ಕಾರ್ಯಾರಂಭ ಮಾಡಿದೆ.

ಹೈಕೋರ್ಟ್ ಮೆಟ್ಟಿಲೇರಿದ್ದ ಐಪಿಎಸ್ ಅಧಿಕಾರಿ ಬಿ. ಆರ್. ರವಿಕಾಂತೇ ಗೌಡ ಹಾಗೂ ಮಾಜಿ ಎಂಎಲ್‌ಸಿ ರಮೇಶ್ ಗೌಡ, 2021ರಿಂದಲೇ ಪವರ್ ಟಿವಿ ಪರವಾನಗಿ ಇಲ್ಲದೆ ಸುದ್ದಿ ಪ್ರಸಾರ ಮಾಡುತ್ತಿದೆ ಎಂದು ಆರೋಪಿಸಿದ್ದರು. ಪರವಾನಗಿಯನ್ನು ನವೀಕರಣ ಮಾಡದೇ ವಾಹಿನಿ ಕಾರ್ಯಾಚರಣೆ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಪವರ್ ಟಿವಿ ಪ್ರಸಾರಕ್ಕೆ ತಡೆಯಾಜ್ಞೆ ನೀಡಿತ್ತು. ಪರವಾನಗಿ ಇಲ್ಲದೆ ಪವರ್ ಟಿವಿ ಕಾರ್ಯ ನಿರ್ವಹಣೆ ಮಾಡುತ್ತಿದೆ ಎಂನ್ನುವ ಆರೋಪದ ಮೇಲೆ ರಾಜ್ಯ ಹೈ ಕೋರ್ಟ್ ಪ್ರಸಾರ ನಿರ್ಬಂಧಿಸಿ ಆದೇಶ ಹೊರಡಿಸಿದ್ದರ ವಿರುದ್ಧ ವಾಹಿನಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಿತ್ತು.
ಸುಪ್ರೀಂ ನಲ್ಲಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಸಾರಥ್ಯದ ಪೀಠ, ಇದೊಂದು ರಾಜಕೀಯ ದ್ವೇಷದ ಕ್ರಮ ಅನ್ನೋದು ಸ್ಪಷ್ಟವಾಗಿ ಗೊತ್ತಾಗುತ್ತಿದೆ. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಣೆ ಮಾಡೋದು ಸರ್ಕಾರಗಳ ಕರ್ತವ್ಯ ಅಂತ ಅಭಿಪ್ರಾಯ ಪಟ್ಟಿದ್ದಲ್ಲದೆ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಹೀಗಾಗಿ, ಪವರ್ ಟಿವಿ ಎಂದಿನಂತೆ ಕಾರ್ಯ ನಿರ್ವಹಣೆ ಮಾಡಬಹುದಾಗಿದೆ.