ಕುಡಿಯುವ ನೀರು ಕೊಡದೆ ಬ್ರಾಂಡ್ ಬೆಂಗಳೂರು ಮಾಡಿ ಏನು ಪ್ರಯೋಜನ.? ಆಮ್ ಆದ್ಮಿ ಪಾರ್ಟಿ ಪ್ರಶ್ನೆ !

If there is potable water, it is possible to make a brand Bangalore. The government should curb the tanker mafia. They should be taxed. Even if it is not possible to provide water for free, arrange to provide water at low cost. Otherwise people will come to your house and ask you to give water, aap warned. ಕುಡಿಯುವ ನೀರಿದ್ದರೆ ಅಲ್ಲವೇ ಬ್ರಾಂಡ್ ಬೆಂಗಳೂರು ಮಾಡಲು ಸಾಧ್ಯ. ಸರ್ಕಾರ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಬೇಕು. ಅವರಿಗೆ ತೆರಿಗೆ ವಿಧಿಸಬೇಕು. ಉಚಿತವಾಗಿ ನೀರು ಕೊಡಲು ಆಗದೇ ಇದ್ದರೂ, ಕಡಿಮೆ ಬೆಲೆಯಲ್ಲಿ ನೀರು ಕೊಡುವ ವ್ಯವಸ್ಥೆ ಮಾಡಿ. ಇಲ್ಲವಾದರೆ ನಿಮ್ಮ ಮನೆ ಬಳಿಗೆ ಬಂದು ಜನ ನೀರು ಕೊಡಿ ಎನ್ನುತ್ತಾರೆ ಎಂದು ಆಪ್ ಎಚ್ಚರಿಕೆ ನೀಡಿದರು.

ಬೆಂಗಳೂರು, (www.thenewzmirror.com) :

ಬೆಂಗಳೂರಿನಲ್ಲಿ ನೀರಿನ ಅಭಾವವಿದೆ. ಇದನ್ಮ ನೀಗಿಸೋಕೆ ಸಾರ್ವಜನಿಕರು ಟ್ಯಾಂಕರ್ ಗಳ ಮೂಲಕ ನೀರು ಪೂರೈಕೆ ಮಾಡಿಕೊಳ್ಳುತ್ತಿದ್ದು, ಟ್ಯಾಂಕರ್ ಮಾಫಿಯಾ ಸದ್ದಿಲ್ಲದೆ ಆರಂಭವಾಗಿದೆ. ಇಂಥ ಟ್ಯಾಂಕರ್ ಮಾಫಿಯಾದಲ್ಲಿ  ಮಾಜಿ ಕಾರ್ಪೊರೇಟರ್‌ಗಳು, ಶಾಸಕರ ಸಂಬಂಧಿಗಳು ಮತ್ತು ಶಾಸಕರ ಹಿಂದೆ ಮುಂದೆ ತಿರುಗುವರೇ ಇದ್ದಾರೆ. ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಇದೆಲ್ಲವೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮೂಗಿನ ನೇರಕ್ಕೆ ನಡೆಯುತ್ತಿದ್ದರೂ ಕಂಡೂ ಕಾಣದಂತಿರುವುದು ಅನುಮಾನ ಹುಟ್ಟಿಸುತ್ತಿದೆ. ಮಾಫಿಯಾದಲ್ಲಿ ಶಿವಕುಮಾರ್ ಪಾತ್ರದ ಬಗ್ಗೆ ಶಂಕೆ ಮೂಡುತ್ತದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಅಭಿಪ್ರಾಯ ಪಟ್ಟಿದ್ದಾರೆ.

RELATED POSTS

ಸಾಂದಾರ್ಭಿಕ ಚಿತ್ರ

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಾವೇರಿ ನೀರಿಗೆ ಪರ್ಯಾಯವಾಗಿ BWSSB ಏನನ್ನೂ ಮಾಡಿಲ್ಲ. ಇಡೀ ಬೆಂಗಳೂರಿನಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ 108 ಬೋರ್ ವೆಲ್‌ಗಳನ್ನು ಮಾತ್ರ ಹಾಕಿಸಿದೆ ಎನ್ನುವುದು ಮಾಹಿತಿ ಹಕ್ಕು ಕಾಯ್ದೆಯಡಿ ತಿಳಿದುಬಂದಿದೆ. ಇದರರ್ಥ ಬಿಡಬ್ಲ್ಯುಎಸ್‌ಎಸ್‌ಬಿ ಬೆಂಗಳೂರಿಗೆ ಸಂಪೂರ್ಣವಾಗಿ ನೀರು ಸರಬರಾಜು ಮಾಡಲು ಕೆಲಸವನ್ನೇ ಮಾಡಿಲ್ಲ ಎಂದು ಆರೋಪಿಸಿದರು.

ಡಿ.ಕೆ. ಶಿವಕುಮಾರ್ ಅವರೇ ಕುಡಿಯುವ ನೀರು ಅತ್ಯಗತ್ಯ ಎಷ್ಟಿದೆ ಎಂದು ಗೊತ್ತಿದೆ. ಕುಡಿಯುವ ನೀರಿದ್ದರೆ ಅಲ್ಲವೇ ಬ್ರಾಂಡ್ ಬೆಂಗಳೂರು ಮಾಡಲು ಸಾಧ್ಯ. ಸರ್ಕಾರ ಟ್ಯಾಂಕರ್ ಮಾಫಿಯಾಗೆ ಕಡಿವಾಣ ಹಾಕಬೇಕು. ಅವರಿಗೆ ತೆರಿಗೆ ವಿಧಿಸಬೇಕು. ಉಚಿತವಾಗಿ ನೀರು ಕೊಡಲು ಆಗದೇ ಇದ್ದರೂ, ಕಡಿಮೆ ಬೆಲೆಯಲ್ಲಿ ನೀರು ಕೊಡುವ ವ್ಯವಸ್ಥೆ ಮಾಡಿ. ಇಲ್ಲವಾದರೆ ನಿಮ್ಮ ಮನೆ ಬಳಿಗೆ ಬಂದು ಜನ ನೀರು ಕೊಡಿ ಎನ್ನುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಕಾವೇರಿ ನೀರು ಬೆಂಗಳೂರಿನ ಎಲ್ಲಾ ಮನೆಗಳಿಗೂ ತಲುಪುತ್ತಿಲ್ಲ. ಬಿಬಿಎಂಪಿ ಕೂಡ 1,534 ಬೋರ್‌ವೆಲ್‌ಗಳನ್ನು ಕೊರೆಸಿದ್ದು, ಈ ಎರಡೂ ಸಂಸ್ಥೆಗಳು ಎಲ್ಲಾ ಮನೆಗಳಿಗೂ ನೀರು ಒದಗಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದ್ದು,  ಅನಧಿಕೃತ ಟ್ಯಾಂಕರ್ ಮಾಫಿಯಾದಲ್ಲಿ ಸಕ್ರಿಯವಾಗಿ ಕೆಲಸ ಮಾಡುತ್ತಿವೆ ಎಂದರು.

ಟ್ಯಾಂಕರ್ ನೀರು ಸರಬರಾಜು ಅನಧಿಕೃತ, ಇದಕ್ಕೆ ಕಾನೂನಿನಲ್ಲಿ ಅನುಮತಿಯೇ ಇಲ್ಲ. ಆದರೂ ಬೆಂಗಳೂರಿನಲ್ಲಿ ನೀರು ಸರಬರಾಜು ಮಾಫಿಯಾ ತೀವ್ರವಾಗಿದೆ ಎಂದರು. ಬೇಸಿಗೆ ಆರಂಭವಾಗುವ ಮುನ್ನವೇ ₹600 ಇರಬೇಕಿದ್ದ ಟ್ಯಾಂಕರ್ ನೀರಿನ ಬೆಲೆ ₹3000 ದವರೆಗೆ ಮುಟ್ಟಿದೆ ಎಂದರು.

ನೀವೇ ಒಂದು ಮೊಬೈಲ್ ಆಪ್ ಸಿದ್ದಮಾಡಿ ಟ್ಯಾಂಕರ್ ಬುಕ್ ಮಾಡಲು ಅವಕಾಶ ಕೊಡಿ. ಸಹಾಯವಾಣಿ ಸಂಖ್ಯೆಯನ್ನು ಕೊಟ್ಟು, ಜನರ ಸಮಸ್ಯೆಗೆ ಸ್ಪಂದಿಸಿ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನೀರಿಗಾಗಿ ದೊಡ್ಡ ಜಗಳವೇ ನಡೆದರೂ ಅಚ್ಚರಿ ಇಲ್ಲ ಎಂದರು.

ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಮಾತನಾಡಿ, ಜಲಮಂಡಳಿ ಅಧಿಕಾರಿಗಳು ಮತ್ತು ನಗರಾಭಿವೃದ್ಧಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 110 ಹಳ್ಳಿಗಳಿಗೆ 131 ಕೋಟಿ ರೂ.ಗಳನ್ನು ಕೊಳವೆಬಾವಿ ಕೊರೆಸಲು ಅನುದಾನ ಕೊಡುತ್ತಿರುವುದು ಸಾಕಾಗುವುದಿಲ್ಲ. ಬೆಂಗಳೂರಿನಲ್ಲಿ ಕೇವಲ 150 ಸ್ಥಳಗಳಲ್ಲಿ ಮಾತ್ರ ನೀರಿನ ಸಮಸ್ಯೆ ಇದೆ ಎಂದು ಹೇಳಿಕೆ ನೀಡಿದ್ದಾರೆ. ಇದು ಸುಳ್ಳು. ಒಂದು ವಿಧಾನಸಭೆ ಕ್ಷೇತ್ರದಲ್ಲಿ 50 ಕಡೆಗಳಲ್ಲಿ ನೀರಿನ ಸಮಸ್ಯೆ ಇದೆ ಎಂದು ಹೇಳಿದರು.

ಬೆಂಗಳೂರು ಮಾಧ್ಯಮ ಉಸ್ತುವಾರಿ ಅನಿಲ್ ನಾಚಪ್ಪ, ಬೆಂಗಳೂರು ಸಂಘಟನಾ ಕಾರ್ಯದರ್ಶಿ ಅಶೋಕ್ ಮೃತ್ಯುಂಜಯ, ಮಹಿಳಾ ಮುಖಂಡ ಸತ್ಯವತಿ ಮಾಧ್ಯಮ ಗೋಷ್ಠಿಯಲ್ಲಿ ಹಾಜರಿದ್ದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist