ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಿರ್ಣಯಗಳೇನು..?

RELATED POSTS

ಚಾಮರಾಜನಗರ(www.thenewzmirror.com): ಕಲ್ಬುರ್ಗಿ ವಿಭಾಗದ ಕ್ಯಾಬಿನೆಟ್ ಸಭೆ ಬಳಿಕ ಇಂದು ಮೈಸೂರು ವಿಭಾಗದ ಸಂಪುಟ ಸಭೆ ನಡೆಸಿದ್ದೇವೆ. ಇದೇ ರೀತಿ ಬೆಳಗಾವಿ ವಿಭಾಗದ ಸಂಪುಟ ಸಭೆ ಬಿಜಾಪುರದಲ್ಲಿ, ಬೆಂಗಳೂರು ವಿಭಾಗದ ಸಭೆ ನಂದಿ ಬೆಟ್ಟದಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು,3647 ಕೋಟಿ 42 ಲಕ್ಷ ಮೌಲ್ಯದ ಕಾಮಗಾರಿಗೆ ಕ್ಯಾಬಿನೆಟ್ ಅಂಗೀಕಾರ. PWD, ಬೃಹತ್-ಸಣ್ಣ ನೀರಾವರಿ ಇಲಾಖೆ, ಇಂಧನ ಇಲಾಖೆ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ, ಬುಡಕಟ್ಟು ಅಭಿವಧ್ಧಿ, ಟ್ರೈಬಲ್ ಹಳ್ಳಿಗಳಿಗೆ ರಸ್ತೆಗಳಿಗೆ ಅನುದಾನ,1787 ಕೋಟಿ ನೀರಾವರಿ, sc/st ಜನರ ವಸತಿ, ಕೇರಿಗಳಿಗೆ ಮೂಲಭೂತ ಸೌಕರ್ಯ .ಮಾನವ-ಪ್ರಾಣಿ ಸಂಘರ್ಷ ತಡೆಯಲು 210 ಕೋಟಿ. ರೈಲ್ವೇ ಬ್ಯಾರಿಕೇಡ್ ಪೂರ್ಣಗೊಳಿಸಲು ಸಂಪುಟ ಅನುಮೋದನೆ ನೀಡಿದೆ ಎಂದರು.

ಸಂಪುಟ ಸಭೆಯ ಹೈಲೈಟ್ಸ್: 

*ಕುಡಿಯುವ ನೀರಿಗಾಗಿ 315 ಕೋಟಿ, ಆರೋಗ್ಯ ಸುಧಾರಣೆಗೆ 228 ಕೋಟಿ, ಕೊಳ್ಳೇಗಾಲದಲ್ಲಿ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸಂಪುಟ ಅಂಗೀಕಾರ. 250 ಬೆಡ್ ಗಳ ಜಿಲ್ಲಾಸ್ಪತ್ರೆ.

*ಪ್ರವಾಸೋದ್ಯಮ ಇಲಾಖೆಗೆ 300 ಕೋಟಿ.

*ಹನೂರಿನಲ್ಲಿ ಹೊಸ ತಾಲ್ಲೂಕಿಗೆ ತಾಲ್ಲೂಕಾ ಆಸ್ಪತ್ರೆ, ತಾಲ್ಲೂಕಾ ಭವನ ನಿರ್ಮಾಣ.

*ಚಿಕ್ಕಲ್ಲೂರಿನಲ್ಲಿ ರಾಜಪ್ಪಾಜಿ, ಸಿದ್ದಪ್ಪಾಜಿ, ಮಂಟೇಸ್ವಾಮಿ ಅಭಿವೃದ್ಧಿ ಕೇಂದ್ರ.

*ಮೈಸೂರಿನ ಇಲವಾಲದಲ್ಲಿ ಅಂತರಾಷ್ಟ್ರೀಯ ಕ್ರೀಡಾಂಗಣಕ್ಕೆ ಜಾಗ ಕೊಡಲು ಅಂಗೀಕಾರ

*40 ಕೋಟಿ ಅಂದಾಜಿನಲ್ಲಿ ಬದನವಾಳು ಅಭಿವೃದ್ಧಿ.

*ಮೈಸೂರಿನ ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ 101 ಕೋಟಿ ಮೊತ್ತದ ಜಾಗ ನೀಡಲಾಗುವುದು.

*ಮೈಸೂರಿನ ಅಟಾರ್ಹಾ ಕಚೇರಿಯ 100 ಕೋಟಿ ವೆಚ್ಚದ ಮ್ಯೂಸಿಯಂ ನಿರ್ಮಾಣಕ್ಕೆ ಒಪ್ಪಿಗೆ.

*ಗುಂಡ್ಲುಪೇಟೆ 110 ಕೆರೆಗಳಿಗೆ ನೀರು ತುಂಬಿಸುವ 475 ಕೋಟಿ ವೆಚ್ಚ.

*ಚಾಮರಾಜನಗರದಲ್ಲಿ ಹೊಸ ಪ್ರವಾಸಿ ಮಂದಿರ ನಿರ್ಮಾಣ, ಚಾಮರಾಜನಗರ ಟೌನ್ ನಲ್ಲಿ ಕುಡಿಯುವ ನೀರು, ಒಳ ಚರಂಡಿ ನಿರ್ಮಾಣ

*ಚಾಮರಾಜನಗರದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ 15 ಕೋಟಿ.

*ಒಟ್ಟಾಗಿ, 3647.62 ಕೋಟಿ ವೆಚ್ಚದಲ್ಲಿ ಮೈಸೂರು  ವಿಭಾಗದಲ್ಲಿ ತುರ್ತು ಅಭಿವೃಧ್ಧಿ ಕಾರ್ಯಗಳು ನಡೆಯಲಿವೆ.

ಸಂತಾಪ:

ಕಾಶ್ಮೀರ ಭಯೋತ್ಪಾದಕ ದಾಳಿಯಲ್ಲಿ ಮೃತರಾದ ಎಲ್ಲ ಹುತಾತ್ಮರಿಗೆ ಶ್ರದ್ಧಾಂಜಲಿ ಮತ್ತು ಧರ್ಮಗುರು ಪೋಪ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Imp update

ಜಮ್ಮು ಕಾಶ್ಮೀರದಲ್ಲಿ ನಡೆದ ಭಯೋತ್ಪಾದನೆ ಕುರಿತು ಖಂಡನಾ ನಿರ್ಣಯ:

ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸುತ್ತದೆ. ಎಲ್ಲ ಮೃತರಿಗೆ ರಾಜ್ಯದ ಜನರ ಪರವಾಗಿ ನೋವಿನ ಸಂತಾಪಗಳನ್ನು ಸಲ್ಲಿಸಲು ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.  

ಉಗ್ರರ ದಾಳಿಗಳು ಮನುಷ್ಯ ಕುಲದ ಮೇಲೆ ನಡೆಸುತ್ತಿರುವ ಭೀಬತ್ಸ ಕೃತ್ಯಗಳು ಎಂದು ತೀರ್ಮಾನಿಸಬೇಕು. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಲು ತೀರ್ಮಾನಿಸಲಾಯಿತು,

ಮುಂದೆ ಈ ರೀತಿಯ ಯಾವುದೇ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ನಮ್ಮ ಸರ್ಕಾರವು ರಾಜ್ಯದ ಜನರ ಪರವಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದರು.

ADVERTISEMENT

Related Posts

Welcome Back!

Login to your account below

Retrieve your password

Please enter your username or email address to reset your password.

Add New Playlist