ಶಿವಮೊಗ್ಗ(www.thenewzmirror.com): ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಎರಡು ತಾಲ್ಲೂಕುಗಳ ಶಾಲೆಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕಳೆದೊಂದು ದಿನದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಆದರೆ ಸಾಗರ ಮತ್ತು ಹೊಸನಗರ ತಾಲ್ಲೂಕುಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಉಭಯ ತಾಲ್ಲೂಕುಗಳ ತಹಶೀಲ್ದಾರ್ ಗಳು ಮುಂಜಾಗ್ರತಾ ಕ್ರಮವಾಗಿ ಆಯಾ ತಾಲ್ಲೂಕು ವ್ಯಾಪ್ತಿಯ ಅಂಗನವಾಡಿಗಳಿಂದ ಪದವಪೂರ್ವ ಕಾಲೇಜುಗಳವರೆಗೆ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದು, ಬೇರೆ ರಜೆ ದಿನದಲ್ಲಿ ಇಂದಿನ ರಜೆಯನ್ನು ಹೊಂದಾಣಿಕೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.